ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಸೆಪ್ಟೆಂಬರ್ 2021
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ರಾಜ್ಯಾದ್ಯಂತ ಪ್ರತಿ ಗ್ರಾಮದಲ್ಲೂ ಸ್ಮಶಾನ ನಿರ್ಮಿಸಬೇಕು. ಅತಿವೃಷ್ಟಿ, ಅನಾವೃಷ್ಟಿಯಿಂದ ಮನೆ ಕಳೆದುಕೊಂಡವರಿಗೆ ಕೂಡಲೆ ಪರಿಹಾರ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಏಕಾಂಗಿಯಾಗಿ ಪ್ರತಿಭಟನೆ ನಡೆಸಲಾಗುತ್ತಿದೆ.
ಸಂಯುಕ್ತ ಜನತಾದಳ ಪಕ್ಷದ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಗೌಡ ಏಕಾಂಗಿಯಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ.
ರಾಜ್ಯದಲ್ಲಿ ಆರು ಸಾವಿರ ಗ್ರಾಮ ಪಂಚಾಯಿತಿಗಳಿವೆ. ಸುಮಾರು 20 ಸಾವಿರ ಗ್ರಾಮಗಳಿವೆ. ಸುಮಾರು 15 ಸಾವಿರ ಗ್ರಾಮಗಳಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲು ಸ್ಮಶಾನಗಳಿಲ್ಲ. ಜಮೀನು ಇರುವವರು ತಮ್ಮ ಕುಟುಂಬದವರ ಅಂತ್ಯ ಸಂಸ್ಕಾರವನ್ನು ತಮ್ಮದೇ ಜಾಗದಲ್ಲಿ ನೆರವೇರಿಸಿಕೊಳ್ಳುತ್ತಾರೆ. ಆದರೆ ಬಡ ರೈತರು, ಕೂಲಿ ಕಾರ್ಮಿಕರು ಸಮಸ್ಯೆಗೆ ಸಿಲುಕುತ್ತಾರೆ. ಇದನ್ನು ನಿವಾರಿಸುವ ಸಲುವಾಗಿ ಗ್ರಾಮ ಠಾಣಾ, ಗುಂಡು ತೋಪು ಜಾಗಗಳಲ್ಲಿ ಸ್ಮಶಾನ ನಿರ್ಮಿಸಬೇಕು ಎಂದು ಶಶಿಕುಮಾರ್ ಗೌಡ ಆಗ್ರಹಿಸಿದರು.
ಅತಿವೃಷ್ಟಿ, ಅನಾವೃಷ್ಟಿಯಿಂದಾಗಿ ಮನೆಗಳನ್ನು ಕಳೆದುಕೊಂಡವರಿಗೆ 2019ರಿಂದ ಈವರೆಗೂ ಪರಿಹಾರ ನೀಡಿಲ್ಲ. ಬಡವರ ಅಂತ್ಯಕ್ರಿಯೆಗೆ ಐದು ಸಾವಿರ ಕೊಡಬೇಕು ಎಂದು ಸರ್ಕಾರ ನಿಯಮ ರೂಪಿಸಿದೆ. ಅದನ್ನು ಕೊಡಲಾಗುತ್ತಿಲ್ಲ ವಿಧವಾ ವೇತನ, ವೃದ್ಧಾಪ್ಯ ವೇತನ ಸೇರಿದಂತೆ ಸರ್ಕಾರದ ಸವಲತ್ತುಗಳು ನೀಡಲು ಅಧಿಕಾರಿಗಳು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು.
ಈ ಬಗ್ಗೆ ಅಧಿವೇಶನದಲ್ಲಿ ಚರ್ಚೆ ನಡೆಸಿ ಬಡವರಿಗೆ ನ್ಯಾಯ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200