ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 11 APRIL 2024
SHIMOGA : ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಪುನಃ ಕಳ್ಳರ ಹಾವಳಿ ಹೆಚ್ಚಾಗಿದೆ. ಬಸ್ ಹತ್ತುವ ವೇಳೆ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಚಿನ್ನ, ಬೆಳ್ಳಿ ಆಭರಣ, ಮೊಬೈಲ್ ಕಳ್ಳತನ ಮಾಡಲಾಗಿದೆ.
ಶಿವಮೊಗ್ಗದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ದಾವಣಗೆರೆ ಪ್ಲಾಟ್‌ಫಾರಂನಲ್ಲಿ ಘಟನೆ ಸಂಭವಿಸಿದೆ. ಬೆಂಗಳೂರು ನಿವಾಸಿ ಪ್ರತಿಭಾ ಎಂಬುವವರು ತಮ್ಮ ಚಿಕ್ಕಮ್ಮನೊಂದಿಗೆ ಬಸ್ ಹತ್ತುವಾಗ ರಶ್ ಇತ್ತು. ನೂಕುನುಗ್ಗಲಿನಲ್ಲಿ ಪ್ರತಿಭಾ ಅವರು ಬಸ್ ಹತ್ತಿ ಸೀಟಿನಲ್ಲಿ ಕುಳಿತಿದ್ದರು. ಕೆಲ ನಿಮಿಷದ ಬಳಿಕ ಕುಟುಂಬದವರಿಗೆ ಕರೆ ಮಾಡಲು, ಮೊಬೈಲ್ ತೆಗೆಯಲು ಹೋದಾಗ ವ್ಯಾನಿಟಿ ಬ್ಯಾಗ್ ಜಿಪ್ ತೆರೆದುಕೊಂಡಿತ್ತು. ಪರಿಶೀಲಿಸಿದಾಗ ಕಳ್ಳತನ ಆಗಿರುವುದು ಬೆಳಕಿಗೆ ಬಂದಿದೆ.
ವ್ಯಾನಿಟಿ ಬ್ಯಾಗ್‌ನಲ್ಲಿ ಇರಿಸಿದ್ದ ಮಾಂಗಲ್ಯ ಸರ, ಬೆಳ್ಳಿ ಕಾಲುಂಗುರು, ಮಕ್ಕಳ ಬೆಳ್ಳಿ ರಿಂಗ್, 16 ಸಾವಿರ ರೂ. ನಗದು, ರಿಯಲ್ ಮೀ ಮೊಬೈಲ್ ಸೇರಿ ಒಟ್ಟು 78 ಸಾವಿರ ರೂ. ಮೌಲ್ಯದ ವಸ್ತುಗಳ ಕಳ್ಳತನವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ‘ಚೆಕ್‌ಪೋಸ್ಟ್‌ನಲ್ಲಿ ಪೊಲೀಸ್, ಸರ್ಕಾರಿ ವಾಹನಗಳು, ಆಂಬುಲೆನ್ಸ್‌ಗಳ ತಪಾಸಣೆಗೆ ಸೂಚನೆʼ
LATEST NEWS
- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು






