ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 6 ಜನವರಿ 2020
ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘದ ಮುಖಂಡರು, ವಿದ್ಯಾರ್ಥಿಗಳು, ಪ್ರಾಧ್ಯಾಪಕರ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿರುವ ಎಬಿವಿಪಿ ಕಾರ್ಯಕರ್ತರು ಮತ್ತು ಗೂಂಡಾಗಳನ್ನು ಬಂಧಿಸಬೇಕು ಅಂತಾ ಒತ್ತಾಯಿಸಿ ಶಿವಮೊಗ್ಗ ಎನ್.ಎಸ್.ಯು.ಐ. ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ NSUI ಕಾರ್ಯಕರ್ತರು, ಹಾಸ್ಟೆಲ್ ಶುಲ್ಕ ಹೆಚ್ಚಳ, ಪೌರತ್ವ (ತಿದ್ದುಪಡಿ) ಕಾಯ್ದೆ, ರಾಷ್ಟ್ರೀಯ ಪೌರತ್ವ ನೊಂದಣಿ ಮತ್ತು ರಾಷ್ಟ್ರೀಯ ಜನಸಂಖ್ಯಾ ನೊಂದಣಿ ವಿಚಾರಗಳನ್ನು ವಿರೋಧಿಸಿ ಜೆ.ಎನ್.ಯು.ನಲ್ಲಿ ಕಳೆದೆರಡು ತಿಂಗಳಿನಿಂದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳನ್ನೇ ಗುರಿಯಾಗಿಟ್ಟುಕೊಂಡು ಮನಸೋ ಇಚ್ಛೆ ಹಲ್ಲೆ ನಡೆಸಿರುವುದನ್ನು ಖಂಡನೀಯ ಎಂದರು.
ಘಟನೆಯಲ್ಲಿ ತೀವ್ರ ಗಾಯಗೊಂಡಿರುವ ಜೆ.ಎನ್.ಯು ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷೆ ಆಯಿಷಿ ಘೋಷ್ ಮತ್ತಿತರರಿಗೆ ಸೂಕ್ತ ಚಿಕಿತ್ಸೆ ನೀಡಿ ರಕ್ಷಣೆ ಒದಗಿಸಬೇಕು. ಘಟನೆಯ ಕುರಿತು ಉನ್ನತ ಮಟ್ಟದ ತನಿಖೆಯಾಗಬೇಕು. ಕೂಡಲೇ ರಾಷ್ಟ್ರಪತಿಗಳು ಮಧ್ಯೆ ಪ್ರವೇಶಿಸಿ, ಪ್ರತಿಭಟನಾನಿರತರ ಮೇಲೆ ನಡೆಯುತ್ತಿರುವ ಹಲ್ಲೆಗಳನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕು.
NSUI ರಾಜ್ಯ ಉಪಾಧ್ಯಕ್ಷ ಚೇತನ್, ಜಿಲ್ಲಾಧ್ಯಕ್ಷ ಬಾಲಾಜಿ, ಕಾರ್ಯಾಧ್ಯಕ್ಷ ವಿನಯ್, ನಗರಾಧ್ಯಕ್ಷ ವಿಜಯ್, ಗ್ರಾಮಾಂತರ ಅಧ್ಯಕ್ಷ ರವಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]