ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 23 DECEMBER 2022
ಶಿವಮೊಗ್ಗ : ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲೆಯಲ್ಲಿರುವ ಕುಗ್ರಾಮಗಳನ್ನು ಗುರುತಿಸಿ ಅಲ್ಲಿ ಗ್ರಾಮ ವಾಸ್ತವ್ಯವನ್ನು (grama vastavya) ಮಾಡುವ ಮೂಲಕ ಅಲ್ಲಿಯ ಸಮಸ್ಯೆಗಳನ್ನು ಸರ್ಕಾರಕ್ಕೆ ಮುಟ್ಟಿಸುವ ವಿಶೇಷ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಗೋಪಾಲ್ ಎಸ್.ಯಡಗೆರೆ ಹೇಳಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ನಮ್ಮ ನಡೆ ಸಮಾಜ ಕಡೆ ಘೋಷಣೆಯಡಿ ಸಂಘವು ಈ ಕಾರ್ಯ ಕೈಗೆತ್ತಿಕೊಂಡಿದೆ ಎಂದರು.
ವಾಸ್ತವ್ಯಕ್ಕೆ ಗ್ರಾಮದ ಆಯ್ಕೆ ಹೇಗೆ?
ಜ್ಲಿಲೆಯ ಅತ್ಯಂತ ಹಿಂದುಳಿದ ಗ್ರಾಮಗಳನ್ನು (grama vastavya) ಸಾರ್ವಜನಿಕರು, ವಿವಿಧ ಸಂಘಟನೆಗಳು, ಸಂಘ-ಸಂಸ್ಥೆಗಳು ತಿಳಿಸಿದರೆ, ಆ ಎಲ್ಲ ಗ್ರಾಮಗಳಿಗೆ ಪತ್ರಕರ್ತರ ತಂಡ ಭೇಟಿ ನೀಡಿ ಮೂರು ಗ್ರಾಮಗಳನ್ನು ಅಂತಿಮಗೊಳಿಸಲಾಗುವುದು.
ಆ ಮೂರು ಕುಗ್ರಾಮಗಳಲ್ಲಿ ಪತ್ರಕರ್ತರು ಒಂದು ದಿನ ವಾಸ್ತವ್ಯ ಹೂಡಿ ಅಲ್ಲಿನ ಸಮಸ್ಯೆಗಳನ್ನು ಸುದ್ದಿರೂಪದಲ್ಲಿ ಪ್ರಕಟಿಸಲಾಗುವುದು. ಪ್ರಕಟಗೊಂಡ ಎಲ್ಲ ವರದಿಗಳನ್ನು ಕ್ರೋಢಿಕರಿಸಿ ಅಂತಿಮ ವರದಿ ಸಿದ್ದಗೊಳಿಸಿ ಆಯಾ ಗ್ರಾಮದ ವ್ಯಾಪ್ತಿಯ ಶಾಸಕರು, ಜಿಲ್ಲಾಡಳಿತ, ಉಸ್ತುವಾರಿ ಸಚಿವರು ಹಾಗೂ ಸರ್ಕಾರಕ್ಕೆ ಗ್ರಾಮದ ಅಭಿವೃದ್ಧಿ ಕುರಿತು ಸಮಗ್ರ ವರದಿ ನೀಡಲಾಗುತ್ತದೆ.
ಅಷ್ಟೇ ಅಲ್ಲದೆ, ಸರ್ಕಾರಕ್ಕೆ ವರದಿ ನೀಡಿದ ಬಳಿಕ ಅದರ ಪ್ರಗತಿ ಕುರಿತು ಸಂಘ ನಿರಂತವಾಗಿ ಪ್ರಯತ್ನಿಸಲಿದೆ.
ಇದನ್ನೂ ಓದಿ – ಶಿವಮೊಗ್ಗ ಪೊಲೀಸ್‌ಗೆ ರಾಷ್ಟ್ರಮಟ್ಟದ ಗರಿ, ಇನ್ಸ್‌ಪೆಕ್ಟರ್ ಗುರುರಾಜ್ ಇಂಡಿಯಾ ಸೈಬರ್ ಕಾಪ್
ಪತ್ರಕರ್ತರ ಸಂಘಟನೆ ಇತಿಹಾಸದಲ್ಲಿ ಮೊದಲ ಬಾರಿ ಈ ರೀತಿಯ ಕಾರ್ಯಕ್ರಮ ನಡೆಸಲಾಗುತ್ತಿದೆ. ಇದರ ಜೊತೆ ಜಿಲ್ಲೆಯಲ್ಲಿ ಮಾದಕ ವಸ್ತುಗಳ ನಿಯಂತ್ರಣ ಉದ್ದೇಶದಿಂದ ವರ್ಷ ಪೂರ್ತಿ ಮಾದಕ ವಸ್ತು ವಿರೋಧಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಜೊತೆಗೆ ಸಾಂಸ್ಕೃತಿ, ಕ್ರೀಡಾ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಕುಗ್ರಾಮಗಳನ್ನು ತಿಳಿಸಲು ಸಾವರ್ಜನಿಕರು ಸಂಘದ ಅಧ್ಯಕ್ಷ ಗೋಪಾಲ್ ಎಸ್.ಯಡಗೆರೆ (9108825454), ಪ್ರಧಾನ ಕಾರ್ಯದರ್ಶಿ ಸಂತೋಷ್ ಕಾಚಿನಕಟ್ಟೆ(9341126340) ಅವರನ್ನು ಸಂಪರ್ಕಿಸಬಹುದಾಗಿದೆ.