ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಆಗಸ್ಟ್ 2020
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ಸಿ.ಎಸ್.ಶಿವಕುಮಾರಸ್ವಾಮಿ ಅವರು ಈ ಅಧಿಸೂಚನೆ ಪ್ರಕಟಿಸಿದ್ದಾರೆ.
ಎಸ್.ಎಸ್.ಜ್ಯೋತಿಪ್ರಕಾಶ್ ಅವರನ್ನು ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಗೋಪಾಳದ ಉಮಾ ಮೂರ್ತಿ, ಭದ್ರಾವತಿ ಜನ್ನಾಪುರದ ಬಿ.ಜಿ.ರಾಮಲಿಂಗಯ್ಯ, ಭದ್ರಾವತಿ ಹೊಸಮನೆ ಮುಖ್ಯ ರಸ್ತೆಯ ಕದಿರೇಶ್, ಶಿವಮೊಗ್ಗ ವಿದ್ಯಾನಗರದ ಎಸ್.ದೇವರಾಜ್ ಅವರನ್ನು ಪ್ರಾಧಿಕಾರದ ಸದಸ್ಯರನ್ನಾಗಿ ನೇಮಿಸಲಾಗಿದೆ.
ಮುಂದಿನ ಮೂರು ವರ್ಷದ ಅವಧಿಗೆ ಅಥವಾ ಸರ್ಕಾರದ ಮುಂದಿನ ಆದೇಶದವರೆಗೆ ಇವರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಮತ್ತು ಸದಸ್ಯರಾಗಿ ಮುಂದುವರೆಯಲಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]