ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | WATER | 28 ಏಪ್ರಿಲ್ 2022
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಬೇಸಿಗೆ ಬೆಳೆಗಳಿಗಾಗಿ ಭದ್ರಾ ಅಚ್ಚುಕಟ್ಟು ನಾಲೆಗಳಲ್ಲಿ ಹರಿಸಲಾಗುತ್ತಿರುವ ನೀರನ್ನು ಮೇ 15 ಕ್ಕೆ ನಿಲ್ಲಿಸಲಾಗುವುದು. ನೀರಿನ ಅವಶ್ಯಕತೆ ಇದ್ದರೆ ಮೇ 20ರವರೆಗೆ ಹೆಚ್ಚುವರಿಯಾಗಿ ನೀರು ಹರಿಸಲಾಗುವುದು ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ತೀರ್ಮಾನಿಸಿತು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಪವಿತ್ರಾ ರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇವತ್ತು ಮಲವಗೊಪ್ಪದ ಕಚೇರಿಯಲ್ಲಿ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
ನೀರು ಸಲಹಾ ಸಮಿತಿ ಮತ್ತು ರೈತ ಸಂಘಟನೆಗಳ ಮುಖಂಡರೊಂದಿಗೆ ಚರ್ಚಿಸಿ ಎಲ್ಲ ರೈತರ ಹಿತದೃಷಿಯಿಂದ ಭದ್ರಾ ಜಲಾಶಯದ ಬೇಸಿಗೆ ಬೆಳೆಗಳಿಗೆ ಹರಿಸುತ್ತಿದ್ದ ನೀರನ್ನು ಮೇ 15 ಕ್ಕೆ ನಿಲ್ಲಿಸಲಾಗುತ್ತಿದೆ. ಹಾಗೂ ನೀರಿನ ಅವಶ್ಯಕತೆಗೆ ಅನುಗುಣವಾಗಿ ಮೇ 20 ರವರೆಗೆ ನೀರನ್ನು ಹರಿಸಲು ಸಮಿತಿ ನಿರ್ಧಾರ ಕೈಗೊಂಡಿದೆ ಎಂದು ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ತಿಳಿಸಿದರು.
ವಿಧಾನ ಪರಿಷತ ಸದಸ್ಯ ಡಿ.ಎಸ್.ಅರುಣ್, ಸಮಿತಿ ಸದಸ್ಯ ಹಾಗೂ ರೈತ ಮುಖಂಡರಾದ ಹೆಚ್.ಆರ್.ಬಸವರಾಜಪ್ಪ, ಸದಸ್ಯರಾದ ತೇಜಸ್ವಿ ಪಟೇಲ್, ವೈ.ಸಿ.ಮಲ್ಲಿಕಾರ್ಜುನ, ರುದ್ರಮೂರ್ತಿ, ಮಂಜುನಾಥ್ ರೆಡ್ಡಿ, ಮಹೇಶ್ ಇತರೆ ಸದಸ್ಯರು ಹಾಗೂ ರೈತ ಸಂಘಟನೆ ಪದಾಧಿಕಾರಿಗಳು, ರೈತ ಮುಖಂಡರು ಸಭೆಯಲ್ಲಿ ಇದ್ದರು.
ಇದನ್ನೂ ಓದಿ – ಶಿವಮೊಗ್ಗ ಫ್ರೀಡಂ ಪಾರ್ಕ್’ನಲ್ಲಿ ರಾತ್ರಿ ಪಾರ್ಟಿ, ವಾಕಿಂಗ್ ಪಾತ್ ಮೇಲೆ ಬೈಕ್ ರೈಡ್, ಆಕ್ರೋಶ