SHIVAMOGGA LIVE NEWS | 27 NOVEMBER 2023
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
SHIMOGA : ಜೆಡಿಎಸ್ ಪಕ್ಷದ ನೂತನ ಜಿಲ್ಲಾಧ್ಯರಾಗಿ ಡಾ. ಕಡಿದಾಳ್ ಗೋಪಾಲ್ ಪದಗ್ರಹಣ ಮಾಡಿದರು. ನಗರದ ಶುಭಮಂಗಳ ಸಭಾಭವನದಲ್ಲಿ ಆಯೋಜಿಸಿದ ಸಮಾರಂಭದಲ್ಲಿ ಕಾರ್ಯಕರ್ತರ ಮುಂದೆ ನೂತನ ಅಧ್ಯಕ್ಷರು ಅಧಿಕಾರ ಸ್ವೀಕರಿಸಿದರು.
ಯಾರೆಲ್ಲ ಏನೇನು ಹೇಳಿದರು?
ಸಮಾರಂಭದಲ್ಲಿ ಭಾಗವಹಿಸಿದ್ದ ಪ್ರಮುಖರು ಪಕ್ಷದ ಸಂಘಟನೆ ಮತ್ತು ಭವಿಷ್ಯದ ಕುರಿತು ಪ್ರಮುಖ ಸಂಗತಿ ಪ್ರಸ್ತಾಪಿಸಿದರು.
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಸಾರಥ್ಯದಲ್ಲಿ ಪಕ್ಷ ಸದೃಢವಾಗಿದೆ. ಪಕ್ಷದ ಸಭೆಯಲ್ಲಿ ಎಲ್ಲ ನಾಯಕರ ತೀರ್ಮಾನದಂತೆ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲಾಗಿದೆ. ಆದರೆ ಜನರು ಈಗಲು ಕುಮಾರಸ್ವಾಮಿ ಅವರ ಆಡಳಿತ ವೈಖರಿ ಸ್ಮರಿಸುತ್ತಾರೆ.ಎಸ್.ಎಲ್.ಭೋಜೇಗೌಡ, ವಿಧಾನ ಪರಿಷತ್ ಸದಸ್ಯ
ಆರು ತಿಂಗಳಾದರೂ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸಲು ವಿಫಲವಾಗಿದೆ. ಜನರ ಸಮಸ್ಯೆ ಪರಿಹರಿಸದೆ ಇತರೆ ಪಕ್ಷದ ಶಾಸಕರನ್ನು ಸೆಳೆಯುವ ಕಾರ್ಯದಲ್ಲಿ ಮಗ್ನವಾಗಿದೆ. ಜೆಡಿಎಸ್ ಪಕ್ಷದ ಶಾಸಕರ ಕ್ಷೇತ್ರಗಳ ಅಭಿವೃದ್ಧಿಗೆ ಹಣ ನೀಡುತ್ತಿಲ್ಲ ಕೆ.ಬಿ.ಪ್ರಸನ್ನ ಕುಮಾರ್, ಮಾಜಿ ಶಾಸಕ
ಶಾಸಕಿ ಶಾರದಾ ಪೂರ್ಯಾನಾಯ್ಕ್, ಪ್ರಮುಖರಾದ ಶಾರದಾ ಅಪ್ಪಾಜಿಗೌಡ, ದೀಪಕ್ ಸಿಂಗ್, ಗೋವಿಂದಪ್ಪ, ಗೀತಾ ಸತೀಶ್, ಚಾಬೂಸಾಬ್, ಕಾಂತರಾಜ್, ಸಿದ್ದಪ್ಪ, ಮಹೇಶ್ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – ಸಚಿವ ಮಧು ಬಂಗಾರಪ್ಪ ಹೆಸರಿನಲ್ಲಿ ಫೇಸ್‌ಬುಕ್ ಗ್ರೂಪ್, ಒಳಗಿದ್ದ ಪೋಸ್ಟ್ ಕಂಡು ಬೆಂಬಲಿಗರು ಶಾಕ್


LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






