ಶಿವಮೊಗ್ಗದ ಕೋಟೆ ದೇವಸ್ಥಾನದಲ್ಲಿ ಸಹಸ್ರ ಕಳಸ ಅಭಿಷೇಕ

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಜುಲೈ 2021

ಶಿವಮೊಗ್ಗದ ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ  ಇವತ್ತು ಸಹಸ್ರ ಕಳಸ ಅಭಿಷೇಕ ಮಹೋತ್ಸವ ನಡೆಯಿತು. ದೇವರ ಮೂರ್ತಿ ಅಭಿಷೇಕ ನಡೆಸಿ ಲೋಕ ಕಲ್ಯಾಣಕ್ಕಾಗಿ ಪ್ರಾರ್ಥನೆ ಸಲ್ಲಿಸಲಾಯಿತು.

ಶ್ರೀ ಸೀತಾರಾಮಾಂಜನೇಯ ಸ್ವಾಮಿ ಮೂರ್ತಿಗೆ ಅಭಿಷೇಕ ನಡೆಸಲಾಯಿತು. ದೇವಸ್ಥಾನದ ಆವರಣದಲ್ಲಿ ಕಳಸಗಳನ್ನು ಇರಿಸಿ, ಅವುಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ದೇವರ ಮೂರ್ತಿಗೆ ಅಭಿಷೇಕ ನಡೆಸಲಾಯಿತು.

ಈ ವೇಳೆ ಭಕ್ತರು ಭಜನೆಗಳು, ಕೀರ್ತನೆಗಳನ್ನು ಹಾಡಿದರು. ಅಭಿಷೇಕವನ್ನು ಕಣ್ತುಂಬಿಕೊಳ್ಳಲು ವಿವಿಧೆಡೆಯಿಂದ ಭಕ್ತರು ಆಗಮಿಸುತ್ತಿದ್ದಾರೆ. ಎಲ್ಲರೂ ಕೋವಿಡ್‍ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ದೇವಸ್ಥಾನದ ಅಡಳಿತ ಮಂಡಳಿ ಮನವಿ ಮಾಡಿದೆ.

Kalleshwara-Enterprises.webp

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment