ಶಿವಮೊಗ್ಗ ಲೈವ್.ಕಾಂ | SHIMOGA NEWS | 02 FEBRUARY 2021
ಕಲ್ಲಗಂಗೂರು ಸ್ಪೋಟ ಪ್ರಕರಣದ ತನಿಖೆಯನ್ನು ಕಂದಾಯ ಇಲಾಖೆ ಕಾರ್ಯದರ್ಶಿ ಹೆಗಲಿಗೆ ವಹಿಸಲಾಗಿದೆ. ಈ ಸಂಬಂಧ ವಿಧಾನಸಭೆಯಲ್ಲಿ ರಾಜ್ಯ ಸರ್ಕಾರ ಹೇಳಿಕೆ ಬಿಡುಗಡೆ ಮಾಡಿದೆ. ಆದರೆ ಸರ್ಕಾರದ ನಡೆಗೆ ವಿರೋಧ ಪಕ್ಷ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ವಿಧಾನಸಭೆಯಲ್ಲಿ ಈ ಸಂಬಂಧ ಹೇಳಿಕೆ ನೀಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಇಲಾಖೆ ಕಾರ್ಯದರ್ಶಿಯಿಂದ ತನಿಖೆ ನಡೆಸಲಾಗುತ್ತದೆ. ಇದರ ಜೊತೆಗೆ ರಾಜ್ಯಾದ್ಯಂತ ಅಕ್ರಮ ಗಣಿಗಾರಿಕೆಯನ್ನು ಮಟ್ಟ ಹಾಕಲಾಗುತ್ತದೆ. ಸ್ಪೋಟಕಗಳ ಅಕ್ರಮ ಸರಬರಾಜನ್ನು ತೊಡೆದು ಹಾಕಲಾಗುತ್ತದೆ ಎಂದು ತಿಳಿಸಿದರು.
ಇದನ್ನೂ ಓದಿ | ‘ಕಲ್ಲು ಕ್ವಾರಿಗಳಲ್ಲಿ ಪ್ರಭಾವಿಗಳಿದ್ದಾರೆ, ರಾಜಕಾರಣಿಗಳನ್ನೆ ಆಟ ಆಡಿಸುತ್ತಿದ್ದಾರೆ’
ಸ್ಪೋಟ ಸಂಭವಿಸಿದ ಸ್ಥಳ ಪರಿಸರ ಸೂಕ್ಷ್ಮ ವಲಯದಲ್ಲಿದೆ. ಅಲ್ಲಿ ಗಣಿಗಾರಿಕೆ ನಡೆಸುವಂತಿಲ್ಲ. ಆದರೆ ಕ್ರಷರ್‍ಗಳಿಗೆ ಅನುಮತಿ ನೀಡಬಹುದಾಗಿದೆ. ಅಕ್ರಮವಾಗಿ ಕ್ವಾರಿ ನಡೆಸುತ್ತಿದ್ದ ಹಿನ್ನೆಲೆ 2018, 2019 ಮತ್ತು 2020ರಲ್ಲಿ ಪ್ರಕರಣ ದಾಖಲಾಗಿದೆ ಎಂದು ಗೃಹ ಸಚಿವರು ವಿವರಿಸಿದರು.
ಕಾಂಗ್ರೆಸ್ ವಿರೋಧ
ಕಲ್ಲಗಂಗೂರು ಸ್ಪೋಟ ಪ್ರಕರಣ ಸಣ್ಣ ತಪ್ಪಲ್ಲ. ಇದರಲ್ಲಿ ರಾಜಕಾರಣಿಗಳು, ಅಧಿಕಾರಿಗಳಿದ್ದಾರೆ ಎಂದು ಆಯನೂರು ಮಂಜುನಾಥ್ ಅವರೆ ಹೇಳಿದ್ದಾರೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು.
ಇದನ್ನೂ ಓದಿ | ಕಲ್ಲಗಂಗೂರು ಸ್ಪೋಟ ಕೇಸ್ ವಿಧಾನಸಭೆಯಲ್ಲಿ ಪ್ರಸ್ತಾಪ, ಸಿದ್ದರಾಮಯ್ಯ ಹೇಳಿದ್ದೇನು?
ಪ್ರಕರಣದ ಉನ್ನತ ಮಟ್ಟದ ತನಿಖೆಯಾಗಬೇಕು. ಸ್ವಾಯತ್ತ ಸಂಸ್ಥೆಯಿಂದ ತನಿಖೆಯಾಗಬೇಕು. ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ನಡೆಸಿದರೆ, ಅವರು ಸಮನ್ಸ್, ವಾರಂಟ್ ನೀಡಲು ಅವಕಾಶ ಇರುತ್ತದೆ. ಕಂದಾಯ ಇಲಾಖೆ ಆಯುಕ್ತರಿಂದ ತನಿಖೆಯಾದರೆ ಇವೆಲ್ಲ ಸಾದ್ಯವಿಲ್ಲ. ಯಾರನ್ನೋ ರಕ್ಷಿಸಲು ಸರ್ಕಾರ ಹೀಗೆ ಮಾಡುತ್ತಿದೆ ಎಂದು ಸಿದ್ದರಾಮಯ್ಯ ಆರೋಪಿಸಿದರು.
ಇದನ್ನೂ ಓದಿ | ಕಲ್ಲಗಂಗೂರು ಸ್ಪೋಟ ಕೇಸ್, ಪರಿಷತ್‌ನಲ್ಲಿ ಆಯನೂರು ಮಂಜುನಾಥ್ ಖಡಕ್ ಚರ್ಚೆ
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]