ಶಿವಮೊಗ್ಗ ಲೈವ್.ಕಾಂ | SHIMOGA NEWS | 6 MARCH 2021
ಹಣಸೋಡು ಸ್ಪೋಟದಿಂದ ಹಾನಿಗೊಳಗಾದ ಮನೆಗಳಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ನವ ಕರ್ನಾಟಕ ನಿರ್ಮಾಣ ವೇದಿಕೆ ನೇತೃತ್ವದಲ್ಲಿ ಸ್ಥಳೀಯರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಜನವರಿ 21ರಂದು ರಾತ್ರಿ ಕಲ್ಲು ಕ್ವಾರಿಗಳಿಗೆ ಉಪಯೋಗಿಸಲು ಅಕ್ರಮವಾಗಿ ತಂದಿದ್ದ ಸ್ಪೋಟಕಗಳು ಸ್ಪೋಟಗೊಂಡು ಶಿವಮೊಗ್ಗ ಸೇರಿದಂತೆ ಪಕ್ಕದ ಜಿಲ್ಲೆಯಲ್ಲೂ ಭೂಕಂಪನ ಅನುಭವವಾಗಿತ್ತು. ಸ್ಪೋಟದಿಂದ ಹುಣಸೋಡು ಸೇರಿ ಹಲವೆಡೆ ಅನೇಕ ಗ್ರಾಮಗಳ ಮನೆಗಳ ಗೋಡೆಗಳು ಬಿರುಕು ಬಿಟ್ಟಿದೆ. ಕೆಲವು ಮನೆಗಳ ಚಾವಣಿ ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳು ಹಾಳಾಗಿವೆ ಎಂದು ಆರೋಪಿಸಿರು.
ತಮ್ಮದಲ್ಲದ ತಪ್ಪಿಗೆ ಗ್ರಾಮಸ್ಥರು ಸಂಕಷ್ಟಕ್ಕೀಡಾಗಿದ್ದಾರೆ. ಹಾನಿಗೊಳಗಾದ ಮನೆಗಳಿಗೆ ಪರಿಹಾರ ನೀಡಬೇಕು ಎಂದು ಸುಮಾರು 500 ಅರ್ಜಿಗಳು ಬಂದಿವೆ. ಆದರೆ ಈತನಕ ಅಧಿಕಾರಿಗಳು ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ. ಪರಿಹಾರವನ್ನೂ ಕೊಟ್ಟಿಲ್ಲ. ಕೂಡಲೆ ಪರಿಹಾರ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ವೇದಿಕೆ ಅಧ್ಯಕ್ಷ ಗೋ.ರಮೇಶ್ ಗೌಡ, ಸಂತೋಷ್, ದೇವೇಂದ್ರಪ್ಪ, ನಾಗರಾಜ್, ನಯನಾ, ಆಶ್ರಫ್, ಪರಶುರಾಮ, ಶಿವಣ್ಣ, ರಾಜು ಗುಜ್ಜರ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]