ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಾಲಿವುಡ್‌ ನಟರ ಫೋಟೊಗಳಿಗೆ ಚಪ್ಪಲಿ ಏಟು, ಕಾರಣವೇನು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಬಸ್‌ಗಳ ಮೇಲೆ ಪ್ರಕಟಿಸಲಾಗಿದ್ದ ಆಂಗ್ಲ ಭಾಷೆಯ (English ads) ಜಾಹೀರಾತುಗಳಿಗೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಸಿಂಹಸೇನೆ ಸಂಘಟನೆ ಕಾರ್ಯಕರ್ತರು ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದರು. ಗುಟ್ಕಾ ಜಾಹೀರಾತುಗಳಿಗೆ ಪೋಸ್‌ ನೀಡಿದ್ದ ಬಾಲಿವುಡ್‌ ನಟರ ಫೋಟೊಗಳಿಗೆ ಚಪ್ಪಲಿ ಏಟು ನೀಡಿದರು.

ಶಿವಮೊಗ್ಗದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‌ಗಳ ಮೇಲಿದ್ದ ಅನ್ಯಭಾಷೆ ಮತ್ತು ಗುಟ್ಕಾ ಜಾಹೀರಾತುಗಳಿಗೆ ಕರವೇ ಸಿಂಹಸೇನೆ ಕಾರ್ಯಕರ್ತರು ಮಸಿ ಬಳಿದು, ಪ್ರತಿಭಟನೆ ನಡೆಸಿದರು. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

Protest-against-advertisement-on-KSRTC-buses-

ಕರ್ನಾಟಕ ಸರ್ಕಾರ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಮತ್ತು ಶೇ.40ರಷ್ಟು ಅನ್ಯ ಭಾಷೆಯ ನಿಯಮ ಪಾಲಿಸುವಂತೆ ಆದೇಶಿಸಿದೆ. ಕೆಎಸ್‌ಆರ್‌ಟಿಸಿ ಬಸ್‌ಗಳು ಈ ನಿಯಮ ಉಲ್ಲಂಘಿಸಿವೆ. ಬಸ್ಸುಗಳ ಮೇಲೆ ಕನ್ನಡೇತರ ಭಾಷೆಗಳ ಜಾಹೀರಾತುಗಳನ್ನು ಅಧಿಕವಾಗಿ ಪ್ರಕಟಿಸಲಾಗಿದೆ. ಆರೋಗ್ಯಕ್ಕೆ ಹಾನಿಕಾರಕವಾದ ಉತ್ಪನ್ನಗಳ ಜಾಹೀರಾತುಗಳನ್ನು ಪ್ರಕಟಿಸುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ » ತಾಳಗುಪ್ಪ – ಬೆಂಗಳೂರು ರೈಲು ಅರಸೀಕೆರೆವರೆಗೆ ಮಾತ್ರ, ಯಶವಂತಪುರ ಎಕ್ಸ್‌ಪ್ರೆಸ್‌ಗೆ ಬದಲಿ ಮಾರ್ಗ

ನಿಯಮ ಉಲ್ಲಂಘಿಸಿರುವ ಮತ್ತು ಆರೋಗ್ಯಕ್ಕೆ ಹಾನಿಕಾರಕ ಎನಿಸುವ ಜಾಹೀರಾತುಗಳನ್ನು ಕೂಡಲೆ ತೆರವು ಮಾಡಬೇಕು ಎಂದು ಆಗ್ರಹಿಸಿದರು. ಈ ಸಂಬಂಧ ಡಿಪೋ ಮ್ಯಾನೇಜರ್‌ಗೆ ಮನವಿ ಸಲ್ಲಿಸಿದರು.

Leave a Comment