ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 30 ಮಾರ್ಚ್ 2022
16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇವತ್ತು ಚಾಲನೆ ಸಿಕ್ಕಿದೆ. ಇಂದಿನಿಂದ ಎರಡು ದಿನ ಶಿವಮೊಗ್ಗದ ಗೋಪಿಶೆಟ್ಟಿಕೊಪ್ಪದ ಚಾಲುಕ್ಯ ನಗರದಲ್ಲಿರುವ ಸಾಹಿತ್ಯ ಗ್ರಾಮದಲ್ಲಿ ವಿವಿಧ ಗೋಷ್ಠಿಗಳು ನಡೆಯಲಿವೆ.
ಇವತ್ತು ಬೆಳಗ್ಗೆ ಸಾಹಿತ್ಯ ಗ್ರಾಮದಲ್ಲಿ ಧ್ವಜಾರೋಹಣ ನೆರವೇರಿಸಿ, ಸಾಹಿತ್ಯ ಸಮ್ಮೇಳನ್ನಕ್ಕೆ ಚಾಲನೆ ನೀಡಲಾಯಿತು. ನಂತರ ಗೋಪಾಳದಿಂದ ಸಮ್ಮೇಳನ ಅಧ್ಯಕ್ಷರಾದ ಡಾ. ಕೆಳದಿ ಗುಂಡಾಜೋಯ್ಸ್ ಅವರನ್ನು ಮೆರವಣಿಗೆ ಮೂಲಕ ಸಮ್ಮೇಳನದ ಸಭಾಂಗಣಕ್ಕೆ ಕರೆತರಲಾಯಿತು.
ಸಾಹಿತ್ಯ ಆಸಕ್ತರು, ಪರಿಷತ್ತಿನ ಪದಾಧಿಕಾರಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಡೊಳ್ಳು ಸೇರಿದಂತೆ ಸಾಂಸ್ಕೃತಿಕ ಕಲಾ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು. ತೆರದ ಜೀಪಿನಲ್ಲಿ ಸಮ್ಮೇಳನದ ಅಧ್ಯಕ್ಷ ಡಾ.ಕೆಳದಿ ಗುಂಡಾಜೋಯ್ಸ್ ಅವರ ಮೆರವಣಿಗೆ ನಡೆಸಲಾಯಿತು.
ಇದಕ್ಕೂ ಮೊದಲು ಗೋಪಾಳದ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಡಾ.ಗುಂಡಾಜೋಯ್ಸ್ ಅವರ ಪುಸ್ತಕ ನೀಡಲಾಯಿತು. ಮಕ್ಕಳು ಕನ್ನಡ ಪುಸ್ತಗಳನ್ನು ಓದಬೇಕು, ಕನ್ನಡವನ್ನು ಬಳಸಬೇಕು, ಬೆಳಸಬೇಕು ಎಂದು ತಿಳಿಸಲಾಯಿತು.
ಸಾಹಿತ್ಯ ಗ್ರಾಮದ ಪಿ.ಲಂಕೇಶ್ ವೇದಿಕೆಯಲ್ಲಿ ಸಾಹಿತಿ, ದೂರದರ್ಶನ ಕಲಾವಿದ ಪ್ರೊ. ಕೃಷ್ಣೇಗೌಡ ಅವರು ದೀಪ ಬೆಳಗಿ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಿದರು.
ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ.ಮಂಜುನಾಥ್ ಸೇರಿ ಹಲವು ಗಣ್ಯರು ಈ ಸಂದರ್ಭ ಉಪಸ್ಥಿತರಿದ್ದರು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422