ಶಿವಮೊಗ್ಗ ಲೈವ್.ಕಾಂ |SHIMOGA NEWS | 17 NOVEMBER 2020
ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚಿಸಲು ನಿರ್ಧರಿಸಿರುವುದಕ್ಕೆ ಶಿವಮೊಗ್ಗದಲ್ಲೂ ಆಕ್ರೋಶ ವ್ಯಕ್ತವಾಗಿದೆ. ಪ್ರಾಧಿಕಾರ ರಚಿಸುವ ನಿರ್ಧಾರವನ್ನು ತಕ್ಷಣ ಕೈಬಿಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನ ಬಣ ಒತ್ತಾಯಿಸಿದೆ.
ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕರವೇ ಸ್ವಾಭಿಮಾನಿ ಬಣದ ಕಾರ್ಯಕರ್ತರು, ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಕನ್ನಡ ವಿರೋಧಿಯಾಗಿದೆ. ಈ ನಿರ್ಧಾರದಿಂದ ಹಿಂದೆ ಸರಿಯದೆ ಇದ್ದರೆ ಸರ್ಕಾರ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನೆರೆ ಪರಿಹಾರಕ್ಕೆ, ಸರ್ಕಾರಿ ನೌಕರರ ವೇತನ ನೀಡಲು ಹಣವಿಲ್ಲ ಅನ್ನುತ್ತಿದ್ದ ಸರ್ಕಾರ, ಮರಾಠ ಅಭಿವೃದ್ಧಿ ಪ್ರಾಧಿಕಾರಿಕ್ಕೆ 50 ಕೋಟಿ ರೂ. ಅನುದಾನ ಕೊಡುವ ಭರವಸೆ ನೀಡಿದೆ. ಕೂಡಲೆ ತಮ್ಮ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಕರವೇ ಸ್ವಾಭಿಮಾನಿ ಬಣದ ಕಾರ್ಯಕರ್ತರು ಒತ್ತಾಯಿಸಿದರು. ಈ ಸಂಬಂಧ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು.
ಜಿಲ್ಲಾಧ್ಯಕ್ಷ ಮಧುಸೂದನ್, ಉಸ್ತುವಾರಿ ಅಧ್ಯಕ್ಷ ರವಿಪ್ರಸಾದ್, ಜಿಲ್ಲಾ ಉಪಾಧ್ಯಕ್ಷ ನಯಾಜ್, ಜಿಲ್ಲಾ ಕಾರ್ಯದರ್ಶಿ ನೂರುಲ್ಲ, ಜಿಲ್ಲಾ ವಕ್ತಾರ ಭರತ್, ಪ್ರಮುಖರಾದ ರಘುನಂದನ್, ಶಿವಕುಮಾರ್, ಅಮೃತ್, ಭರತ್, ಇಂದ್ರೇಶ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200