ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಜೂನ್ 2020
ಶಾಲೆಗಳನ್ನು ಪ್ರಾರಂಭಿಸುವ ಕುರಿತು ಸರ್ಕಾರ ತರಾತುರಿಯ ನಿರ್ಧಾರ ಕೈಗೊಳ್ಳಬಾರದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಒತ್ತಾಯಿಸಿದೆ.
ಈ ಕುರಿತು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ ಕಾರ್ಯಕರ್ತರು, ಕರೋನ ತಡೆಗಟ್ಟಲು ಸಾಧ್ಯವಾಗುತ್ತಿಲ್ಲ. ಇನ್ನೂ ಲಸಿಕೆ ಕಂಡು ಹಿಡಿದಿಲ್ಲ. ಈ ಸಂದರ್ಭದಲ್ಲಿ ಶಾಲೆಗಳನ್ನು ಪ್ರಾರಂಭಿಸುವುದು ಸೂಕ್ತವಲ್ಲ. ಈ ವಿಚಾರದಲ್ಲಿ ಸರ್ಕಾರ ತರಾತುರಿಯ ನಿರ್ಧಾರ ಕೈಗೊಳ್ಳಬಾರದು ಎಂದು ಒತ್ತಾಯಿಸಿದರು.
ಕೆಲವು ಖಾಸಗಿ ಶಾಲೆಗಳಲ್ಲಿ ಈಗಾಗಲೇ ನೂತನ ನೋಂದಣಿ ಆರಂಭವಾಗಿದೆ. ಅದನ್ನು ಕೂಡಲೆ ನಿಲ್ಲಿಸಬೇಕು. ಇಂತಹ ಶಾಲೆಗಳ ವಿರುದ್ಧ ನೊಟೀಸ್ ಜಾರಿ ಮಾಡಬೇಕು ಎಂದು ಆಗ್ರಹಿಸಿದರು.
ಸಂಘಟನೆ ಜಿಲ್ಲಾಧ್ಯಕ್ಷ ಮಧುಸೂದನ್, ಜಿಲ್ಲಾ ಉಸ್ತುವಾರಿ ಅಧ್ಯಕ್ಷ ರವಿಪ್ರಸಾದ್, ಜಿಲ್ಲಾ ಉಪಾಧ್ಯಕಷ್ ನಯಾಜ್, ಜಿಲ್ಲ ಕಾರ್ಯಕರ್ಶಿ ನೂರುಲ್ಲ, ಜಿಲ್ಲಾ ವಕ್ತಾರ ಭರತ್ ಸೇರಿದಂತೆ ಹಲವರು ಈ ವೇಳೆ ಇದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















