ಶಿವಮೊಗ್ಗ : ಮರಾಠಿ ಮಾತನಾಡಲಿಲ್ಲ ಎಂಬ ಕಾರಣಕ್ಕೆ KSRTC ಬಸ್ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ಮರಾಠಿ ಪುಂಡರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಕಾರ್ಯಕರ್ತರು ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಅಶೋಕ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕರವೇ ಸ್ವಾಭಿಮಾನಿ ಬಣದ ಕಾರ್ಯಕರ್ತರು, ದಾಳಿಕೋರರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
‘ಬಸ್ಸುಗಳ ಸಿಬ್ಬಂದಿಗೆ ಮಸಿ ಬಳಿಯುತ್ತೇವೆʼ
ಕೆಎಸ್‌ಆರ್‌ಟಿಸಿ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಅವರನ್ನು ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಒಂದು ವೇಳೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಶಿವಮೊಗ್ಗದಲ್ಲಿ ಮಹಾರಾಷ್ಟ್ರದ ಬಸ್ಸುಗಳ ಚಾಲಕ, ನಿರ್ವಾಹಕರಿಗೆ ಮಸಿ ಬಳಿದು ಕಳುಹಿಸಲಾಗುತ್ತದೆ ಎಂದು ಎಚ್ಚರಿಸಿದರು.
ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ್ದಲ್ಲದೆ ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಲಾಗಿದೆ. ಹಲ್ಲೆಕೋರರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಶಿವಮೊಗ್ಗದಲ್ಲಿ ಮಹಾರಾಷ್ಟ್ರದ ಬಸ್ಸುಗಳನ್ನು ತಡೆದು ಕರ್ನಾಟಕದ ಧ್ವಜ ಕಟ್ಟುತ್ತೇವೆ. ಡ್ರೈವರ್, ಕಂಡಕ್ಟರ್‌ಗಳ ಮುಖಕ್ಕೆ ಮಸಿ ಬಳಿಯುತ್ತೆವೆ.
– ಕಿರಣ್ ಕುಮಾರ್, ಕರವೇ ಸ್ವಾಭಿಮಾನಿ ಬಣದ ಅಧ್ಯಕ್ಷ
ಇದೇ ವೇಳೆ ದಾಳಿ ನಡೆಸಿದವರ ಪ್ರತಿಕೃತಿಯನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಇದನ್ನೂ ಓದಿ » ಶಿವಮೊಗ್ಗದಿಂದ ಹೊರಟ ವಿಶೇಷ ರೈಲು, ಕುಂಭ ಮೇಳದತ್ತ ಸಾವಿರಕ್ಕೂ ಹೆಚ್ಚು ಭಕ್ತರು
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200