ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 24 SEPTEMBER 2023
SHIMOGA : ತಮಿಳುನಾಡಿಗೆ ಕಾವೇರಿ ನೀರು (Cauvery Water) ಹರಿಸದಿರುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಜೈಲ್ ಸರ್ಕಲ್‌ನಲ್ಲಿ ಕಾವೇರಿ ನಿರ್ವಹಣಾ ಪ್ರಾಧಿಕಾರದ ಭೂತ ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡ ಬಣದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬೆಂಗಳೂರಿಗೆ ಕುಡಿಯುವ ನೀರು, ಕಾವೇರಿ (Cauvery Water) ಕಣಿವೆ ರೈತರ ಹೊಲ, ಗದ್ದೆಗೆ ನೀರು ಅಗತ್ಯವಿದೆ. ಇಂತಹ ಸಂದರ್ಭ 7 ಟಿಎಂಸಿ ನೀರು ಹರಿಸುವಂತೆ ಆದೇಶಿಸಲಾಗಿದೆ. ಇಷ್ಟು ಪ್ರಮಾಣದ ನೀರನ್ನು ಎಲ್ಲಿಂದ ತರುವುದು. ಆದ್ದರಿಂದ, ಯಾವುದೆ ಕಾರಣಕ್ಕೂ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸಬಾರದು. ಒಂದು ವೇಳೆ ನೀರು ಹರಿಸಿದರೆ ಕರವೇ ವತಿಯಿಂದ ಹೋರಾಟ ತೀವ್ರಗೊಳಿಸಲಾಗುತ್ತದೆ ಎಂದು ಎಚ್ಚರಿಸಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಕಪ್ಪು ಬಾವುಟ ಪ್ರದರ್ಶನ, ತಕ್ಷಣ ತಜ್ಞರ ಸಮಿತಿ ಕಳುಹಿಸುವಂತೆ ಪ್ರಧಾನಿ ಮೋದಿಗೆ ಒತ್ತಾಯ
ಕರವೇ ರಾಜ್ಯ ಕಾರ್ಯದರ್ಶಿ ಮಂಜುನಾಥ್ ಕೋಟ್ಯಾನ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ಗೌರವಾಧ್ಯಕ್ಷ ಮಂಜುನಾಥ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಂಗನಾಥ್, ಜಿಲ್ಲಾ ಉಪಾಧ್ಯಕ್ಷ ಎಸ್.ಗಂಗಾಧರ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
LATEST NEWS
- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

- ಸಾರ್ವಜನಿಕರೆ ಎಚ್ಚರ, ಹೊಸನಗರದಲ್ಲಿ ಮೆಸ್ಕಾಂ ಅಲರ್ಟ್ ಪ್ರಕಟ, ಏನಿದು?

About The Editor
ನಿತಿನ್ ಆರ್.ಕೈದೊಟ್ಲು






