ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 30 ಮಾರ್ಚ್ 2022
ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ವತಿಯಿಂದ “ಜನರನ್ನು ಉಳಿಸಿ ದೇಶವನ್ನು ಉಳಿಸಿ” ಎಂಬ ಘೋಷವಾಕ್ಯದೊಂದಿಗೆ ಶಿವಮೊಗ್ಗದಲ್ಲಿ ಬೃಹತ್ ಮೆರವಣಿಗೆ ನಡೆಸಲಾಯಿತು. ನಂತರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಬೇಕು. ಖಾಸಗೀಕರಣ ಬೇಡ. ಎಲ್ಲಾ ಶ್ರಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಬೇಕು, ಗುತ್ತಿಗೆ ಕಾರ್ಮಿಕರನ್ನು ಕಾಯಂಗೊಳಿಸಬೇಕು. ಹಳೆ ಪಿಂಚಣಿ ಯೋಜನೆ ಜಾರಿಯಾಗಬೇಕು ಸೇರಿದಂತೆ ಸುಮಾರು 12 ಕ್ಕೂ ಹೆಚ್ಚು ಬೇಡಿಕೆಗಳ ಈಡೇರಿಕೆಗೆ ಪ್ರತಿಭಟನೆಯಲ್ಲಿ ಆಗ್ರಹಿಸಲಾಯಿತು.
ಜನರ ಹಕ್ಕುಗಳು ಮತ್ತು ಜೀವನೋಪಾಯಗಳನ್ನು ಉಳಿಸಲು ಹಾಗೂ ವಿದೇಶಿ ಕಾರ್ಪೊರೇಟ್ ಸಂಸ್ಥೆಗಳ ಓಡಿಸಲು ದೇಶದ ಅರ್ಥ ವ್ಯವಸ್ಥೆಯನ್ನು ಗಟ್ಟಿಗೊಳಿಸಲು ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.
ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ, ರೈತ ವಿರೋಧಿ, ಜನ ವಿರೋಧಿ ನೀತಿಗಳನ್ನು ಅನುಸರಿಸುತ್ತಾ ಕಾರ್ಪೊರೇಟ್ ಪರವಾಗಿದೆ. ಈ ದೇಶವನ್ನು ವಿನಾಶದಿಂದ ತಪ್ಪಿಸಬೇಕಾಗಿದೆ. ಏರುತ್ತಿರುವ ಬೆಲೆ ಇಳಿಯಬೇಕು. ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸಬೇಕು. ರಕ್ಷಣೆ ಮತ್ತು ವಿಮಾ ಸೌಲಭ್ಯ ಸಿಗಬೇಕು ಎಂದು ಆಗ್ರಹಿಸಿದರು.
ಅಕ್ಷರ ದಾಸೋಹ ನೌಕರರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದು, ಕೇಂದ್ರ ಸರ್ಕಾರ ಕಡಿತ ಮಾಡಿರುವ ಶೇ. 40ರ ಅನುದಾನ ನೀಡಬೇಕು. ಕನಿಷ್ಠ 24 ಸಾವಿರ ವೇತನ ನೀಡಬೇಕು. ಅಂಗನವಾಡಿಗಳಲ್ಲಿ ಎಲ್.ಕೆ.ಜಿ. ಯು.ಕೆ.ಜಿ ಸ್ಥಾಪಿಸಬೇಕು ಎಂದು ಆಗ್ರಹಿಸಿದರು.
ಸಿಐಟಿಯು, ಎಐಸಿಸಿಟಿಯು, ಬಿ.ಎಸ್.ಎನ್.ಎಲ್. ಎಂಪ್ಲಾಯಿಸ್ ಯೂನಿಯನ್, ಗ್ರಾಮ ಪಂಚಾಯಿತಿ ನೌಕರರ ಸಂಘ, ಅಕ್ಷರ ದಾಸೋಹ, ಅಂಗನವಾಡಿ ನೌಕರರ ಸಂಘ ಸೇರಿದಂತೆ ಸುಮಾರು 11 ಕ್ಕೂ ಹೆಚ್ಚು ಕಾರ್ಮಿಕ ಸಂಘಟನೆಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದವು. ಕಾರ್ಮಿಕ ನಾಯಕ ಡಿ.ಸಿ.ಮಾಯಣ್ಣ, ಅನಂತರಾಂ, ಹನುಮಮ್ಮ, ತುಳಸಿಪ್ರಭಾ, ಭಾಗ್ಯ, ಗೀತಾ, ಜಯಮ್ಮ, ತಾರಾ, ಅಶ್ವಿನಿ, ಪುಷ್ಪಾ, ಸೂರ್ಯಕಲಾ, ನಾಣಯ್ಯ, ವೇಲು ಇತರರಿದ್ದರು.
ಪ್ರತಿಭಟನೆಯ ಫೋಟೊಗಳು
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422