SHIMOGA NEWS, 20 NOVEMBER 2024 : ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ (ATNCC) ವತಿಯಿಂದ ಕುವೆಂಪು ವಿಶ್ವವಿದ್ಯಾಲಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಕುವೆಂಪು ರಂಗಮಂದಿರದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ‘ಆಚಾರ್ಯ ಕನ್ನಡ ಉತ್ಸವ – 2024’ ನಡೆಯಿತು. ಸಾಧಕರನ್ನು ಸನ್ಮಾನಿಸಲಾಯಿತು.
ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಅವರು ಕಾರ್ಯಕ್ರಮ ಉದ್ಘಾಟಿಸಿದರು.
![]() |
ಭಾಷೆ ನಮ್ಮ ಭಾವನೆಗಳನ್ನು ವ್ಯಕ್ತಪಡಿಸುವ ಸಾಧನ. ಕರ್ನಾಟಕದ ನೆಲದಲ್ಲಿ ಕನ್ನಡದ ಉಳುವಿನ ಚರ್ಚೆ ನಡೆಯುವುದು ಬೇಸರದ ಸಂಗತಿ. ಸರ್ಕಾರ, ಸರ್ಕಾರೇತರ ಸಂಸ್ಥೆಗಳಲ್ಲಿ ವ್ಯವಹಾರಗಳು ಕನ್ನಡದಲ್ಲಿಯೆ ನಡೆದಾಗ ಭಾಷೆಯ ಬಗೆಗಿನ ಆತಂಕ ದೂರವಾಗಲಿದೆ. ಇಂಗ್ಲೀಷ್ ತುಂಬಾ ಅವ್ಯವಸ್ಥಿತ ಭಾಷೆ. ಅದರಲ್ಲಿನ ತಪ್ಪು ಸರಿ ತಿದ್ದಲು ಇಂದಿಗೂ ಯಾವುದೇ ಅಕಾಡೆಮಿಗಳಿಲ್ಲ.
ಎಸ್.ಎನ್.ನಾಗರಾಜ, ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ
ಆಳುವ ಸರ್ಕಾರಗಳಿಗೆ ನನ್ನದೊಂದು ಪ್ರಶ್ನೆ, ಹಿಂದಿಯ ಬಗ್ಗೆ ನಿಮಗೆ ಮಮತೆಯಿದೆ. ಇಂಗ್ಲೀಷ್ ಬಗ್ಗೆ ವ್ಯಾಮೋಹವಿದೆ. ಅದರೆ ಕನ್ನಡಮ್ಮನ ಗುಡಿ ಕಟ್ಟಲು, ಕನ್ನಡದ ಧ್ವಜ ಎತ್ತಿ ಹಿಡಿಯಲು ನಿಮಗೆ ಆಗುತ್ತಿಲ್ಲವೆ. ಸರ್ಕಾರ ಇಂಗ್ಲೀಷ್ ಮಾಧ್ಯಮವನ್ನು ಅನಿವಾರ್ಯಗೊಳಿಸುತ್ತಿದೆ. ಲಾಭಕ್ಕಾಗಿ ಭಾಷೆಯನ್ನು ಬಂಡವಾಳವಾಗಿ ಮಾಡಿಕೊಂಡಿದ್ದಾರೆ. ಈ ಮೂಲಕ ನಮ್ಮ ಮಾತೃಭಾಷೆಯನ್ನು ಹಿಂದೆ ದೂಡುವಂತೆ ಮಾಡುತ್ತಿದ್ದಾರೆ.
ಡಾ. ಸಬಿತಾ ಬನ್ನಾಡಿ, ಕುವೆಂಪು ವಿವಿ ಕನ್ನಡ ಅಧ್ಯಾಪಕರ ವೇದಿಕೆ ಅಧ್ಯಕ್ಷೆ
ಇದೇ ವೇಳೆ ಕರ್ನಾಟಕ ನಾಟಕ ಅಕಾಡೆಮಿ ಜಿಲ್ಲಾ ಸಂಚಾಲಕ ಗಣೇಶ್ ಕೆಂಚನಾಳ್ ಅವರನ್ನು ಸನ್ಮಾನಿಸಲಾಯಿತು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಪಿ.ಆರ್.ಮಮತಾ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಎಪಿಎಂಸಿ ಉದ್ದಿಮೆದಾರ ಡಿ.ಎಸ್.ಚಂದ್ರು, ವಿವಿಧ ವಿಭಾಗಗಳ ನಿರ್ದೇಶಕರಾದ ಪ್ರೊ.ಕೆ.ಎಂ.ನಾಗರಾಜು, ಮಂಜುನಾಥ. ಎನ್, ಶ್ರೀಲಲಿತ, ಗಾಯತ್ರಿ, ಪ್ರವೀಣ್.ಬಿ.ಎನ್, ಚೈತ್ರ.ಕೆ ಉಪಸ್ಥಿತರಿದ್ದರು.
ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ ವಿವಿಧ ಶಾಲೆಗಳಿಗೆ ನ.23ರಂದು ರಜೆ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200