ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ನವೆಂಬರ್ 2021
ಶಿವಮೊಗ್ಗದಲ್ಲಿ 66ನೇ ಕರ್ನಾಟಕ ರಾಜ್ಯೋತ್ಸವವನ್ನು ವೈಭವದಿಂದ ಆಚರಿಸಲಾಯಿತು. ನಗರದ ಡಿಎಆರ್ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ತ್ರಿವರ್ಣ ಧ್ವಜಾರೋಹಣ ನೆರವೇರಿಸಿದರು.
![]() |
ಬಳಿಕ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ಶಿವಮೊಗ್ಗದ ನೆಲ ಸಮಸಮಾಜದ ಪರಿಕಲ್ಪನೆಯ ನೆಲೆವೀಡು. ಕದಂಬರು, ಚಾಲುಕ್ಯರು, ಗಂಗರು, ರಾಷ್ಟ್ರಕೂಟರು, ಹೊಯ್ಸಳರು, ವಿಜಯನಗರದ ಅರಸರು, ಮೈಸೂರು ಸಂಸ್ಥಾನ ಮತ್ತು ಕೆಳದಿ ಮನೆತನ ಈ ಪ್ರದೇಶವನ್ನು ಆಳುತ್ತ ಕನ್ನಡತನದ ಸೊಗಡನ್ನು ಇನ್ನಷ್ಟು ವಿಸ್ತರಿಸುವಲ್ಲಿ ತನ್ನ ಕೊಡುಗೆ ನೀಡಿದೆ. ಅನುಭವ ಮಂಟಪದ ಅಲ್ಲಮಪ್ರಭು ಬಳ್ಳಿಗಾವಿಯವರು, ಅಕ್ಕ ಮಹಾದೇವಿಯವರು ಉಡುತಡಿಯವರು, ಶರಣ ಚಿಂತನೆಗಳ ನೆಲೆವೀಡು ಎಂದೇ ಖ್ಯಾತವಾದ ಕಲ್ಯಾಣ ಚಳುವಳಿಯ ಮೇರು ವ್ಯಕ್ತಿತ್ವಗಳು ಶಿವಮೊಗ್ಗ ಜಿಲ್ಲೆಯವರು ಎಂಬುದು ನಮ್ಮ ಹೆಮ್ಮೆ ಎಂದರು.
ಇದೆ ವೇಳೆ ಸಚಿವರಿಗೆ ಪೊಲೀಸರು ಗೌರವ ವಂದನೆ ನೀಡಿದರು. ಕಲಾ ತಂಡಗಳು, ಸ್ಥಬ್ಧ ಚಿತ್ರಗಳ ಮೆರವಣಿಗೆ ನಡೆಸಲಾಯಿತು.
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್, ಜಿಲ್ಲಾ ಪಂಚಾಯಿತಿ ಸಿಇಒ ವೈಶಾಲಿ ಸೇರಿದಂತೆ ಹಲವರು ಈ ವೇಳೆ ಇದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200