ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಜಿಲ್ಲಾ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯಿಂದ ನಗರದ ನೆಹರು ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ (Rajyotsava) ಆಚರಿಸಲಾಯಿತು. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ರಾಷ್ಟ್ರ ಧ್ವಜಾರೋಹಣ ಮಾಡಿದರು.
ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಪ್ರಮುಖ ವಿಷಯಗಳನ್ನು ಪ್ರಸ್ತಾಪಿಸಿದರು.
ಡಿಸಿ ಏನೆಲ್ಲ ಹೇಳಿದರು? ಇಲ್ಲಿದೆ ಪಾಯಿಂಟ್ಸ್
ಜಾತಿ, ಮತ, ಭಾಷೆ, ಬಣ್ಣಗಳ ಹಂಗಿಲ್ಲದೆ ಆಚರಿಸುವ ಕನ್ನಡ ರಾಜ್ಯೋತ್ಸವವನ್ನು ನಾಡಿನ ಎಲ್ಲರೂ ಸಂಭ್ರಮ ಸಡಗರದಿಂದ ಆಚರಿಸುತ್ತಿದ್ದು, ಈ ಸಂಭ್ರಮದ ದಿನದಂದು ನಾವೆಲ್ಲ ಕನ್ನಡದ ಉಳಿವಿಗೆ ಸಂಕಲ್ಪ ಮಾಡಬೇಕಿದೆ.
[su_divider top=”no” style=”dotted” divider_color=”#b8b8b8″ link_color=”#000000″ margin=”10″]
ಕರ್ನಾಟಕ ಏಕೀಕರಣಕ್ಕೆ ಕಾರಣರಾದ ಕುವೆಂಪು, ಆಲೂರು ವೆಂಕಟರಾವ್, ಶಿವರಾಮ ಕಾರಂತ, ಮಾಸ್ತಿ ವೆಂಕಟೇಶ ಅಯ್ಯಂಗಾರ್, ಬಿ.ಎಂ.ಶ್ರೀಕಂಠಯ್ಯ ಸೇರಿದಂತೆ ಹಲವು ಮಹನೀಯರನ್ನು ನಾವು ಸ್ಮರಿಸಬೇಕಿದೆ.

[su_divider top=”no” style=”dotted” divider_color=”#b8b8b8″ link_color=”#000000″ margin=”10″]
ಮಲೆನಾಡ ಹೆಬ್ಬಾಗಿಲು ಎಂದೆ ಪ್ರಸಿದ್ದವಾಗಿರುವ ಶಿವಮೊಗ್ಗ ಜಿಲ್ಲೆ ಹಲವು ಜನಪರ ಚಳವಳಿಗಳಿಗೆ ಜನ್ಮ ನೀಡಿದೆ. ಅಲ್ಲಮಪ್ರಭು, ಶಿವಶರಣೆ ಅಕ್ಕಮಹಾದೇವಿ ಜಿಲ್ಲೆಯವರು. ಶರಣ ಚಿಂತನೆಗಳ ನೆಲೆವೀಡು ಎಂದೆ ಖ್ಯಾತವಾದ ಕಲ್ಯಾಣ ಚಳುವಳಿಯ ಮೇರು ವ್ಯಕ್ತಿತ್ವಗಳು ಜಿಲ್ಲೆಯವರು ಎಂಬುದು ನಮ್ಮ ಹೆಮ್ಮೆ ಎಂದು ತಿಳಿಸಿದರು.
[su_divider top=”no” style=”dotted” divider_color=”#b8b8b8″ link_color=”#000000″ margin=”10″]
ಕನ್ನಡ ಸಾರಸ್ವತ ಲೋಕಕ್ಕೆ ಜಿ.ಎಸ್. ಶಿವರುದ್ರಪ್ಪ ಅವರಂತಹ ರಾಷ್ಟ್ರಕವಿಯನ್ನು ನೀಡಿದ ಹಿರಿಮೆ ಮಾತ್ರವಲ್ಲ, ಕುವೆಂಪು ಮತ್ತು ಯು.ಆರ್.ಅನಂತಮೂರ್ತಿ ಅವರಂತಹ ಇಬ್ಬರು ಜ್ಞಾನಪೀಠ ಪುರಸ್ಕೃತರನ್ನು ನಾಡಿಗೆ ಪರಿಚಯಿಸಿದ ಹಾಗೂ ಮೂವರು ಮುಖ್ಯಮಂತ್ರಿಗಳನ್ನು ನಾಡಿಗೆ ನೀಡಿದ ಹಿರಿಮೆ ಜಿಲ್ಲೆಯದ್ದು ಎಂದರು.

ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ, ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಸಿ.ಎಸ್.ಚಂದ್ರಭೂಪಾಲ್. ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್, ಎಡಿಸಿ ಅಭಿಷೇಕ್, ಪಾಲಿಕೆ ಆಯಕ್ತ ಮಾಯಣ್ಣಗೌಡ, ಡಿಡಿಪಿಐ ಎಸ್.ಆರ್.ಮಂಜುನಾಥ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿದ್ದರು.
ಇದನ್ನೂ ಓದಿ » ಅಧಿಕಾರಿ ಮನೆಯ ಕಾಂಪೌಂಡ್‌ನಲ್ಲಿ ಶ್ರೀಗಂಧದ ಮರ ಕಟ್, ಗಾಡಿಯ ಚಕ್ರ ನಾಪತ್ತೆ
Rajyotsava
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















