ಶಿವಮೊಗ್ಗದಲ್ಲಿ ರಾಜ್ಯೋತ್ಸವ, ಧ್ವಜಾರೋಹಣದ ನಂತರ ಜಿಲ್ಲಾಧಿಕಾರಿ ಏನೆಲ್ಲ ಹೇಳಿದರು?

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗ: ಜಿಲ್ಲಾ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯಿಂದ ನಗರದ ನೆಹರು ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ (Rajyotsava) ಆಚರಿಸಲಾಯಿತು. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ರಾಷ್ಟ್ರ ಧ್ವಜಾರೋಹಣ ಮಾಡಿದರು.

ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಪ್ರಮುಖ ವಿಷಯಗಳನ್ನು ಪ್ರಸ್ತಾಪಿಸಿದರು.

ಡಿಸಿ ಏನೆಲ್ಲ ಹೇಳಿದರು? ಇಲ್ಲಿದೆ ಪಾಯಿಂಟ್ಸ್‌

point-1ಜಾತಿ, ಮತ, ಭಾಷೆ, ಬಣ್ಣಗಳ ಹಂಗಿಲ್ಲದೆ ಆಚರಿಸುವ ಕನ್ನಡ ರಾಜ್ಯೋತ್ಸವವನ್ನು ನಾಡಿನ ಎಲ್ಲರೂ ಸಂಭ್ರಮ ಸಡಗರದಿಂದ ಆಚರಿಸುತ್ತಿದ್ದು, ಈ ಸಂಭ್ರಮದ ದಿನದಂದು ನಾವೆಲ್ಲ ಕನ್ನಡದ ಉಳಿವಿಗೆ ಸಂಕಲ್ಪ ಮಾಡಬೇಕಿದೆ.

point-2ಕರ್ನಾಟಕ ಏಕೀಕರಣಕ್ಕೆ ಕಾರಣರಾದ ಕುವೆಂಪು, ಆಲೂರು ವೆಂಕಟರಾವ್, ಶಿವರಾಮ ಕಾರಂತ, ಮಾಸ್ತಿ ವೆಂಕಟೇಶ ಅಯ್ಯಂಗಾರ್, ಬಿ.ಎಂ.ಶ್ರೀಕಂಠಯ್ಯ ಸೇರಿದಂತೆ ಹಲವು ಮಹನೀಯರನ್ನು ನಾವು ಸ್ಮರಿಸಬೇಕಿದೆ. 

Karnataka-Rajyotsava-in-Shimoga-Nehru-Stadium

point-3ಮಲೆನಾಡ ಹೆಬ್ಬಾಗಿಲು ಎಂದೆ ಪ್ರಸಿದ್ದವಾಗಿರುವ ಶಿವಮೊಗ್ಗ ಜಿಲ್ಲೆ ಹಲವು ಜನಪರ ಚಳವಳಿಗಳಿಗೆ ಜನ್ಮ ನೀಡಿದೆ. ಅಲ್ಲಮಪ್ರಭು, ಶಿವಶರಣೆ ಅಕ್ಕಮಹಾದೇವಿ ಜಿಲ್ಲೆಯವರು. ಶರಣ ಚಿಂತನೆಗಳ ನೆಲೆವೀಡು ಎಂದೆ ಖ್ಯಾತವಾದ ಕಲ್ಯಾಣ ಚಳುವಳಿಯ ಮೇರು ವ್ಯಕ್ತಿತ್ವಗಳು ಜಿಲ್ಲೆಯವರು ಎಂಬುದು ನಮ್ಮ ಹೆಮ್ಮೆ ಎಂದು ತಿಳಿಸಿದರು.

point-4ಕನ್ನಡ ಸಾರಸ್ವತ ಲೋಕಕ್ಕೆ ಜಿ.ಎಸ್. ಶಿವರುದ್ರಪ್ಪ ಅವರಂತಹ ರಾಷ್ಟ್ರಕವಿಯನ್ನು ನೀಡಿದ ಹಿರಿಮೆ ಮಾತ್ರವಲ್ಲ, ಕುವೆಂಪು ಮತ್ತು ಯು.ಆರ್.ಅನಂತಮೂರ್ತಿ ಅವರಂತಹ ಇಬ್ಬರು ಜ್ಞಾನಪೀಠ ಪುರಸ್ಕೃತರನ್ನು ನಾಡಿಗೆ ಪರಿಚಯಿಸಿದ ಹಾಗೂ ಮೂವರು ಮುಖ್ಯಮಂತ್ರಿಗಳನ್ನು ನಾಡಿಗೆ ನೀಡಿದ ಹಿರಿಮೆ ಜಿಲ್ಲೆಯದ್ದು ಎಂದರು.

Dc Speech in Shimoga Rajyotsava

ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ, ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಸಿ.ಎಸ್.ಚಂದ್ರಭೂಪಾಲ್. ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್, ಎಡಿಸಿ ಅಭಿಷೇಕ್, ಪಾಲಿಕೆ ಆಯಕ್ತ ಮಾಯಣ್ಣಗೌಡ, ಡಿಡಿಪಿಐ ಎಸ್.ಆರ್.ಮಂಜುನಾಥ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿದ್ದರು.

ಇದನ್ನೂ ಓದಿ » ಅಧಿಕಾರಿ ಮನೆಯ ಕಾಂಪೌಂಡ್‌ನಲ್ಲಿ ಶ್ರೀಗಂಧದ ಮರ ಕಟ್, ಗಾಡಿಯ ಚಕ್ರ ನಾಪತ್ತೆ

Rajyotsava

Leave a Comment