ಶಿವಮೊಗ್ಗ ಲೈವ್
ಶಿವಮೊಗ್ಗ: ನಗರದ ಶ್ರೀ ಬಾಲಸುಬ್ರಹ್ಮಣ್ಯಸ್ವಾಮಿ ದೇವಸ್ಥಾನ ಟ್ರಸ್ಟ್ ವತಿಯಿಂದ ಇಲ್ಲಿನ ಗುಡ್ಡೇಕಲ್ ದೇವಸ್ಥಾನದಲ್ಲಿ ನ. 24ರಂದು ಸಂಜೆ 6 ಗಂಟೆಗೆ ಕಾರ್ತಿಕ ದೀಪೋತ್ಸವ ಹಮ್ಮಿಕೊಳ್ಳಲಾಗಿದೆ. (ಈ ಸುದ್ದಿಯನ್ನು ಇನ್ನು 29 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ಅಂದು ಸಂಜೆ 4 ಗಂಟೆಗೆ ಶ್ರೀ ಮೈಲಾರೇಶ್ವರ ದೇವಸ್ಥಾನದಿಂದ ಕಾವಡಿ, ಪಂಬೈ ವಾದ್ಯ ಹಾಗೂ ಮಂಗಳವಾದ್ಯದೊಂದಿಗೆ ಮೆರವಣಿಗೆ ಆರಂಭವಾಗಲಿದೆ. ಮಹಿಳೆಯರು ದೀಪಗಳನ್ನು ಹಿಡಿದು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದು, ಮೆರವಣಿಗೆ ಶ್ರೀ ಬಾಲಸುಬ್ರಹ್ಮಣ್ಯಸ್ವಾಮಿ ದೇವಸ್ಥಾನ ತಲುಪಿದ ಬಳಿಕ ಸ್ವಾಮಿಗೆ ಮಹಾ ದೀಪಾರಾಧನೆ ನೆರವೇರಲಿದೆ.

ನಂತರ ಸಿಡಿಮದ್ದು ಹಾಗೂ ಬಾಣಬಿರುಸುಗಳ ಪ್ರದರ್ಶನ ನಡೆಯಲಿದೆ. ತಮಿಳಾ ತಮಿಳಾ ದೈವಿಕ ನೃತ್ಯ ಹಾಗೂ ಪಂಬೈ ಕಲಾ ತಂಡದಿಂದ ಭಕ್ತಿಗೀತೆ ಮತ್ತು ನೃತ್ಯ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ದೇವಸ್ಥಾನದ ಕಾರ್ಯದರ್ಶಿ ಎಂ. ಲೋಕೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ: