ಶಿವಮೊಗ್ಗ: ನಗರದ ಶಿವಶಕ್ತಿ ಸಮಾಜದಿಂದ ಅ.11ರಂದು ಸಮಾಜದ ಅಧ್ಯಕ್ಷೆ ಎನ್‌ಟಿ ರಸ್ತೆಯಲ್ಲಿನ ಹೆಚ್.ಪಾರ್ವತಮ್ಮ ಅವರ ಘಂಟಾಕರಣ ನಿವಾಸಕ್ಕೆ ಉತ್ತರಾಖಂಡ ಕೇದಾರಪೀಠದ ಶ್ರೀ ಭೀಮಾಶಂಕರಲಿಂಗ ಶಿವಾಚಾರ್ಯ ಸ್ವಾಮೀಜಿ (Kedara Peeta) ಆಗಮಿಸಲಿದ್ದಾರೆ ಎಂದು ಸಂತೋಷ್ ಬಳ್ಳೆಕೆರೆ ತಿಳಿಸಿದರು.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂತೋಷ್ ಬಳ್ಳೆಕೆರೆ, ಅ.10 ರಂದು ಸಂಜೆ 4ಕ್ಕೆ ಶಿವಪ್ಪನಾಯಕ ವೃತ್ತದಿಂದ ಸ್ವಾಮೀಜಿಯವರನ್ನು ಬೀರನಕೆರೆ ಮಠದ ಆನೆಯ ಅಂಬಾರಿ ಮೇಲೆ ಮೆರವಣಿಗೆ ಮೂಲಕ ಪಾರ್ವತಮ್ಮ ಅವರ ಮನೆಗೆ ಕರೆತಲಾಗುವುದು.ಇದಕ್ಕಾಗಿ ಅರಣ್ಯ ಇಲಾಖೆ ಅನುಮತಿ ಪಡೆಯಲಾಗಿದೆ ಎಂದರು.
ಏನೆಲ್ಲ ಕಾರ್ಯಕ್ರಮ ಇರಲಿದೆ?
ಅ.11ರಂದು ಪಾರ್ವತಮ್ಮ ಅವರ ಮನೆಯಲ್ಲಿ ಬೆಳಗ್ಗೆ 8ಕ್ಕೆ ಇಷ್ಟಲಿಂಗ ಪೂಜೆ ನಡೆಯಲಿದೆ. ಮಧ್ಯಾಹ್ನ 12ಕ್ಕೆ ಧರ್ಮಸಭೆ ನಡೆಯಲಿದ್ದು, ಶ್ರೀ ಭೀಮಾಶಂಕರಲಿಂಗ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.

ಧರ್ಮಸಭೆಯಲ್ಲಿ ಎಡೆಯೂರು ಬಾಳೆಹೊನ್ನೂರು ಖಾಸಾ ಶಾಖಾಮಠದ ಶ್ರೀ ರೇಣುಕ ಶಿವಾಚಾರ್ಯ ಸ್ವಾಮೀಜಿ, ಗವಿಮಠದ ಶ್ರೀ ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ, ಬಿಳಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ, ಶಿಲಾಮಠದ ಶ್ರೀ ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ಶ್ರೀ ಗುರುಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಶ್ರೀ ಗುರುಹಾಲಸ್ವಾಮೀಜಿ, ಶ್ರೀ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಆಗಮಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ರತ್ನಾ ಮಂಜುನಾಥ್, ಉಮೇಶ್ ಹಿರೇಮಠ್, ಲಿಂಗೇಗೌಡ್ರು, ಸುನಂದಾ ಹಿರೇಮಠ್, ಮರುಳೇಶ್ ಮತ್ತಿತರರಿದ್ದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಅಕ್ಬರ್ ಕಾಲಿಗೆ ಗುಂಡೇಟು, ಜಿಲ್ಲಾ ರಕ್ಷಣಾಧಿಕಾರಿ ಫಸ್ಟ್ ರಿಯಾಕ್ಷನ್, ಏನಂದ್ರು ಎಸ್‌ಪಿ?
Kedara Peeta
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





