ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ನವೆಂಬರ್ 2020
ಗ್ರಾಮೋದ್ಯೋಗ ಉಳಿಸಿ ಆಂದೋಲನದ ಭಾಗವಾಗಿ ಶಿವಮೊಗ್ಗದಲ್ಲಿ ಕೈ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಆಯೋಜಿಸಲಾಗಿದೆ. ಜನಶಿಕ್ಷಣ ಸಂಸ್ಥೆ ನಿರ್ದೇಶಕಿ ಬಿ.ವೈ.ಅರುಣಾದೇವಿ ಅವರು ಪ್ರದರ್ಶನಕ್ಕೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅರುಣಾ ದೇವಿ, ಗ್ರಾಮೋದ್ಯೋಗಕ್ಕೆ ತಮ್ಮ ಸಹಕಾರವಿದೆ. ಮುಂದಿನ ಬಜೆಟ್ ಒಳಗೆ ಗ್ರಾಮೋದ್ಯೋಗ ಉಳಿಸುವ ಕಡೆಗೆ ಸಮಗ್ರ ಯೋಜನೆ ರೂಪಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚಿಸಬೇಕಿದೆ ಎಂದು ತಿಳಿಸಿದರು.
ರಂಗಕರ್ಮಿ ಪ್ರಸನ್ನ ಅವರು ಮಾತನಾಡಿ, ಗ್ರಾಮೋದ್ಯೋಗ ಜನರ ಚಳವಳಿಯಾಗಬೇಕಿದೆ. ಕರೋನ ಎಲ್ಲರ ಕಣ್ತೆರೆಸಿದೆ. ಲಾಭದ ಹಿಂದೆ ಬಿದ್ದು ನರಕ ಸೃಷ್ಟಿಸಿಕೊಂಡಿದ್ದೇವೆ. ಈಗ ಭ್ರಮೆಗಳಿಂದ ಜನರು ದೂರಾಗುತ್ತಿದ್ದಾರೆ ಎಂದರು.
ಕಟೀಲು ಅಶೋಕ್ ಪೈ ಸ್ಮಾರಕ ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟಿ ರಜನಿ ಪೈ ಅಧ್ಯಕ್ಷತೆ ವಹಿಸಿದ್ದರು. ಡಿವಿಎಸ್ ಕಾಲೇಜು ಪ್ರಾಂಶುಪಾಲರಾದ ಡಾ.ಹೆಚ್.ಟಿ.ಕೃಷ್ಣಮೂರ್ತಿ, ಡಾ.ರಾಜೇಂದ್ರ ಚೆನ್ನಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕೈ ಉತ್ಪನ್ನಗಳ ಖರೀದಿ
ಶಿವಮೊಗ್ಗದ ಮಲ್ಲಿಕಾರ್ಜುನ ಟಾಕೀಸ್ ಪಕ್ಕದ ರಸ್ತೆಯಲ್ಲಿರುವ ಕಟೀಲು ಅಪ್ಪು ಪೈ ಸ್ಮಾರಕ ಕಾಲೇಜಿನ ಆವರಣದಲ್ಲಿ ಕೈ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮಾಡಲಾಗುತ್ತಿದೆ. ಖಾದಿ ಬಟ್ಟೆಗಳು, ಸೀರೆ, ಮಾಸ್ಕ್, ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮಾಡಲಾಗುತ್ತಿದೆ. ಮೊದಲ ದಿನವೇ ಪ್ರದರ್ಶನಕ್ಕೆ ಉತ್ತಮ ರೆಸ್ಪಾನ್ಸ್ ಲಭಿಸಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422