ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಮಾರ್ಚ್ 2021
ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಲಾಟಿ ಆಸ್ಪತ್ರೆ ವತಿಯಿಂದ ವಿಶ್ವ ಕಿಡ್ನಿ ದಿನ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಿಡ್ನಿಯ ಆರೋಗ್ಯ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದು ಆಸ್ಪತ್ರೆಯ ಮೂತ್ರಪಿಂಡ ಸಲಹಾ ತಜ್ಞ ಡಾ. ರವಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತಾನಾಡಿದ ಡಾ. ರವಿ, ಕಿಡ್ನಿಯ ಆರೋಗ್ಯ ಅತಿ ಮುಖ್ಯ. ವರ್ಷಕ್ಕೆ ಒಮ್ಮೆಯಾದರೂ ಕಿಡ್ನಿಯ ಪರೀಕ್ಷೆ ನಡೆಸಿಕೊಳ್ಳಬೇಕು. ಈ ಹಿನ್ನೆಲೆಯಲ್ಲಿ ಆಸ್ಪತ್ರೆ ವತಿಯಿಂದ ಕಿಡ್ನಿ ಆರೋಗ್ಯದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕ ಪವನ್ ಕುಮಾರ್ ಮಾತನಾಡಿ, ಕಿಡ್ನಿ ತಪಾಸಣೆಗಾಗಿ ಮಾರ್ಚ್ 11 ರಿಂದ 27ರವರೆಗೆ ವಿಶೇಷ ಪ್ಯಾಕೇಜ್ ಪರಿಚಯಿಸಲಾಗಿದೆ. ವೈದ್ಯರ ಸಮಾಲೋಚನೆ ಸೇರಿದಂತೆ ವಿವಿಧ ಪರೀಕ್ಷೆಗಳನ್ನು ಇದು ಒಳಗೊಂಡಿದೆ ಎಂದರು.
ಡಾ.ಮೊಹಮ್ಮದ್ ಇಮ್ರಾನ್, ಡಾ. ಅವಿನಾಶ್ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿ ಇದ್ದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422