SHIVAMOGGA LIVE NEWS | 16 MARCH 2023
SHIMOGA : ತೀರ್ಥಹಳ್ಳಿ ತಾಲೂಕು ಮೇಲಿನ ಕುರುವಳ್ಳಿ ಗ್ರಾಮ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರ ಮೇಲೆ ಪಿಡಿಒ ಅವರು ಹಲ್ಲೆ ನಡೆಸಿದ್ದಾರೆ. ಪಿಡಿಒ ವಿರುದ್ಧ ತಕ್ಷಣವೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ಧರಣಿ (Protest) ನಡೆಸಲಾಗುತ್ತಿದೆ.
ಶಿವಮೊಗ್ಗದ ಕುವೆಂಪು ರಸ್ತೆಯಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಆವರಣದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರ ಕಚೇರಿ ಮುಂದೆ ಧರಣಿ (Protest) ನಡೆಸಲಾಗುತ್ತಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಕಿಮ್ಮನೆ ರತ್ನಾಕರ್ ಹೇಳಿದ್ದೇನು?
ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು, ಗ್ರಾಮ ಪಂಚಾಯಿತಿ ಸದಸ್ಯರ ಮೇಲೆ ಹಲ್ಲೆ ಕುರಿತು ದೂರು ಕೊಟ್ಟು ತಿಂಗಳುಗಳೆ ಕಳೆದಿವೆ. ಈವರೆಗೂ ಕ್ರಮ ಕೈಗೊಂಡಿಲ್ಲ. ಈ ರೀತಿಯಾದರೆ ಗ್ರಾಮ ಪಂಚಾಯಿತಿ ಸದಸ್ಯರು ಆಡಳಿತ ನಡೆಸುವುದಾದರೂ ಹೇಗೆ. ಪಿಡಿಒ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸಲು ತಾವು ಸಿದ್ಧ ಎಂದರು.
ಇನ್ನು, ದೂರು ಬಂದರು ಪಿಡಿಒ ಅವರ ವಿರುದ್ಧ ಕ್ರಮ ಕೈಗೊಂಡಿಲ್ಲ, ವರ್ಗಾವಣೆಯನ್ನು ಮಾಡಿಲ್ಲ. ಅವರು ಅಷ್ಟೊಂದು ಉತ್ತಮ ಅಧಿಕಾರಿ ಅನಿಸಿದರೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಪಿಎ ಆಗಿ ನೇಮಿಸಿಕೊಳ್ಳಲಿ ಎಂದು ಸವಾಲು ಹಾಕಿದರು.
ಮೇಲಿನ ಕುರುವಳ್ಳಿ ಮಾದರಿಯಲ್ಲೇ ಈ ಹಿಂದೆ ಕೋಣಂದೂರು ಗ್ರಾಮ ಪಂಚಾಯಿತಿಯಲ್ಲಿ ಸದಸ್ಯೆ ವಿಶಾಲಾಕ್ಷಿ ಪ್ರಫುಲ್ಲಚಂದ್ರ ಅವರ ಮೇಲೆ ಬಿಜೆಪಿ ಬೆಂಬಲಿತ ಸದಸ್ಯನೊಬ್ಬ ಹಲ್ಲೆ ನಡೆಸಿದ್ದರು. ಸುರೇಶ್ ಎಂಬುವವರ ವಿರುದ್ಧವು ಹಲ್ಲೆಯಾಗಿತ್ತು. ಅದು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಆದರೂ ಈತನಕ ಯಾವುದೆ ಕ್ರಮವಾಗಿಲ್ಲ. ಇದನ್ನು ಗಮನಿಸಿದಾಗ ಆರಗ ಜ್ಞಾನೇಂದ್ರ ಅವರು ಜೀವಂತ ಇದ್ದಾರೋ ಇಲ್ಲವೋ ಎಂಬ ಅನುಮಾನ ಮೂಡುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲಾಧಿಕಾರಿ ವಾಸ್ತವ್ಯಕ್ಕೆ ಗ್ರಾಮ ನಿಗದಿ, ಮಾ.18ರಂದು ಎಲ್ಲಿ ವಾಸ್ತವ್ಯ ಮಾಡಲಿದ್ದಾರೆ ಡಿಸಿ?
ತೀರ್ಥಹಳ್ಳಿ ಮತ್ತು ಶಿವಮೊಗ್ಗದ ಕಾಂಗ್ರೆಸ್ ಮುಖಂಡರು, ವಿವಿಧ ಗ್ರಾಮ ಪಂಚಾಯಿತಿಗಳ ಸದಸ್ಯರು ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡಿದ್ದರು.