ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ಜುಲೈ 2020
ರಾಜ್ಯ ಸರ್ಕಾರ ರೈತರ ಹಣವನ್ನು ಕಿತ್ತುಕೊಂಡು ಆಶಾ ಕಾರ್ಯಕರ್ತೆಯರಿಗೆ ನೀಡಲು ಮುಂದಾಗಿದೆ ಎಂದು ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಹಕಾರ ಸಂಘಗಳು ಆಶಾ ಕಾರ್ಯಕರ್ತೆಯರಿಗೆ ದಾನದ ರೂಪದಲ್ಲಿ ಹಣ ನೀಡುವಂತೆ ಸರ್ಕಾರ ಆದೇಶ ಮಾಡಿದೆ. ಸಹಕಾರ ಸಂಘದಲ್ಲಿ ಇರುವುದು ರೈತರ ಷೇರು ಹಣ. ಈ ಹಣ ಆಶಾ ಕಾರ್ಯಕರ್ತೆಯರಿಗೆ ನೀಡಬೇಕು ಎಂದರೆ ಸರ್ಕಾರ ಏಕೆ ಬೇಕು. ಸಹಕಾರಿ ಸಂಘಗಳೆ ನೆಲಕಚ್ಚಿ ಹೋಗಿವೆ. ಹೀಗಿರುವಾಗ ರೈತರ ಹಣ ಕಿತ್ತುಕೊಂಡು ಆಶಾ ಕಾರ್ಯಕರ್ತೆಯರಿಗೆ ನೀಡಲು ಹೊರಟಿರುವ ಸರ್ಕಾರದ ಕ್ರಮ ರೈತ ವಿರೋಧಿಯಾಗಿದೆ ಎಂದು ಆರೋಪಿಸಿದರು.
ಸರ್ಕಾರದ ಈ ಕ್ರಮ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತೇವೆ. ಆಶಾ ಕಾರ್ಯಕರ್ತೆಯರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಣ ನೀಡಬೇಕು ಎಂದು ಕಿಮ್ಮನೆ ರತ್ನಾಕರ್ ಆಗ್ರಹಿಸಿದರು.
ಜನ ಬೀದಿಯಲ್ಲಿ ಬಿದ್ದು ಸಾಯುತ್ತಿದ್ದಾರೆ
ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕಿಮ್ಮನೆ ರತ್ನಾಕರ್ ಅವರು, 1700 ಕೋಟಿ ರೂಪಾಯಿ ಖರ್ಚು ಮಾಡಿ 17 ಶಾಸಕರನ್ನು ಖರೀದಿಮಾಡಿ ಸರ್ಕಾರ ರಚಿಸಿರುವ ಬಿಜೆಪಿ ಜನರು ಬೀದಿ ಮೇಲೆ ಸಾಯುವಂಥ ಸ್ಥಿತಿ ಬಂದಿದೆ. ರಾಜ್ಯದಲ್ಲಿ ಸರ್ಕಾರ ಇದೆ ಎಂದೇ ಅನಿಸುತ್ತಿಲ್ಲ. ಇವರು ರಾಜೀನಾಮೆ ನೀಡಿ ಮನೆಗೆ ಹೋಗುವುದೇ ಒಳ್ಳೆಯದು ಎಂದು ಟೀಕಿಸಿದರು.
ಯಡಿಯೂರಪ್ಪ ಒಬ್ಬರೇ ಕೆಲಸ ಮಾಡ್ತಿದ್ದಾರೆ
ಮುಖ್ಯಮಂತ್ರಿ ಯಡಿಯೂರಪ್ಪ ಒಬ್ಬರೇ ಕೆಲಸ ಮಾಡುತ್ತಿದ್ದಾರೆ. ಉಳಿದವರು ಅರಾಮಾಗಿದ್ದಾರೆ. ಸಚಿವ ಸಂಪುಟದಲ್ಲಿ ಹೊಂದಾಣಿಕೆಯೇ ಇಲ್ಲ. ಲಾಕ್ ಡೌನ್ ಟೈಮಲ್ಲಿ ಶಂಕುಸ್ಥಾಪನೆಯ ಅಗತ್ಯವಿದೆಯೇ. ಎಲ್ಲರನ್ನು ಒಟ್ಟುಗೂಡಿಸಿ ಕೊಂಡು ಕಾರ್ಯಕ್ರಮ ಮಾಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.
ಬಿಜೆಪಿಯವರಿಗೆ ಕರೋನ ಬರೋದಿಲ್ಲವಾ?
ಕಾಂಗ್ರೆಸ್ ನವರಿಗೆ ಮಾತ್ರ ಕರೋನಾ ಬರುತ್ತದೆಯೇ? ಬಿಜೆಪಿಯವರಿಗೆ ಬರುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಭಾನುವಾರ ಲಾಕ್ ಡೌನ್ ಮಾಡಲಾಗಿತ್ತು. ಆದರೆ ಅಂದು ಬಿಜೆಪಿ ಸಚಿವರು ಹಾಗೂ ಶಾಸಕರು ಶಂಕುಸ್ಥಾಪನೆ ಕಾರ್ಯಕ್ರಮ ಮಾಡುತ್ತಾರೆ. ಹಾಗಾದರೆ ಲಾಕ್ ಡೌನ್ ಯಾರಿಗೆ. ಇದನ್ನು ನೋಡಿದರೆ ಈಶ್ವರಪ್ಪ ಅವರು ಸತ್ಯ ಹೇಳಿದ್ದಾರೆ ಅನಿಸುತ್ತೆ. ರಾಕ್ಷಸರಿಗೆ ಕರೋನ ಬರುವುದಿಲ್ಲ ಅಂತಾ ಸಮರ್ಥಿಸಿಕೊಂಡಿದ್ದರು ಎಂದು ವ್ಯಂಗ್ಯವಾಡಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ಮಾಜಿ ಶಾಸಕ ಪ್ರಸನ್ನಕುಮಾರ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ವೇದಾ ವಿಜಯಕುಮಾರ್, ಹಾಪ್‍ಕಾಮ್ಸ್ ಉಪಾಧ್ಯಕ್ಷ ವಿಜಯಕುಮಾರ್, ಜಿಲ್ಲಾ ಪಂಚಾಯಿತಿ ಸದಸ್ಯ ಕಲಗೋಡು ರತ್ನಾಕರ್, ಕೆಪಿಸಿಸಿ ಕಾರ್ಯದರ್ಶಿ ದೇವೇಂದ್ರಪ್ಪ, ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಯೋಗೀಶ್, ಪಾಲಿಕೆ ಸದಸ್ಯ ರಮೇಶ್ ಹೆಗ್ಡೆ ಸುದ್ದಿಗೋಷ್ಠಿಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]