ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಜೂನ್ 2020
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ನಾನು ಗೇಣಿದಾರನ ಮಗ. ಆರಗ ಜ್ಞಾನೇಂದ್ರ ಗೇಣಿ ತೆಗೆದುಕೊಳ್ಳುತ್ತಿದ್ದವರು. ಆದರೂ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರುದ್ಧ ಒಂದೇ ಒಂದು ಮಾತನಾಡುತ್ತಿಲ್ಲ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗದಲ್ಲಿ ಇವತ್ತು ಸುದ್ದಿಗಾರರೊಂದಿಗೆ ಮಾತನಾಡಿದ ಕಿಮ್ಮನೆ ರತ್ನಾಕರ್, ಜನ ಸಂಘದ ಕಾಲದಿಂದಲೂ ಇವರು ಭೂ ಮಾಲೀಕರ ಪರವಾಗಿ ನಿಂತಿದ್ದಾರೆ. ಒಂದು ವೇಳೆ ಇದೇ ಕಾಯ್ದೆಯನ್ನು ಕಾಂಗ್ರೆಸ್ ಪಕ್ಷ ಜಾರಿಗೆ ತಂದಿದ್ದರೆ ಇವರ ವರ್ತನೆಯೇ ಬೇರೆಯದ್ದಾಗಿರುತ್ತಿತ್ತು. ಇಂತಹ ಸಂದರ್ಭದಲ್ಲಿ ಈ ರೀತಿ ಕಾಯ್ದೆಗಳನ್ನು ಜಾರಿಗೆ ತರುವುದೇ ಮೂರ್ಖತನದ ನಿರ್ಧಾರ ಎಂದು ಟೀಕಿಸಿದರು.
ಆರಗ ಜ್ಞಾನೇಂದ್ರ ಏಕೆ ಮೌನವಾಗಿದ್ದಾರೆ?
ಶಾಸಕ ಆರಗ ಜ್ಞಾನೇಂದ್ರ ಅವರು ಈ ಕಾಯ್ದೆ ಕುರಿತು ಮೌನವಾಗಿ ಇರುವುದೇಕೆ ಗೊತ್ತಿಲ್ಲ. ಚುನಾವಣೆ ಪ್ರಚಾರದಲ್ಲಿ ನಾನು ಗೇಣಿ ತೆಗೆದುಕೊಳ್ಳುತ್ತಿದ್ದೆ ಎಂದು ಹೇಳಿಕೊಂಡು ಓಡಾಡಿದ್ದರು. ಈಗ ಈ ಕಾಯ್ದೆ ವಿರುದ್ಧ ಅವರು ಮಾತನಾಡುತ್ತಿಲ್ಲ ಎಂದರು.
ಆಯನೂರು ಮಂಜುನಾಥ್ ಬೀದಿಗಿಳಿಯಬೇಕಿತ್ತು
ಕಾರ್ಮಿಕ ಕಾಯ್ದೆಗೆ ತಿದ್ದುಪಡಿ ತಂದು ಕಾರ್ಮಿಕ ವಿರೋಧಿ ನೀತಿ ಅನುಸರಿಸಲಾಗುತ್ತಿದೆ. ಈ ವಿಚಾರವಾಗಿ ಆಯನೂರು ಮಂಜುನಾಥ್ ಅವರು ಬೀದಿಗಿಳಿದು ಹೋರಾಟ ಮಾಡಬೇಕಿತ್ತು. ಅವರು ಬಿಎಂಎಸ್‍ನಲ್ಲಿ ಇದ್ದವರು. ಪತ್ರಿಕಾ ಹೇಳಿಕೆ ಕೊಟ್ಟು ಸುಮ್ಮನಾಗುವುದಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]