ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ

ಶಿವಮೊಗ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಗೆ ಹಾಗೂ ವ್ಯಕ್ತಿಗಳನ್ನು ಒಳಗೊಂಡು ಕಲೆ, ಶಿಕ್ಷಣ, ಸಾಹಿತ್ಯ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿರುವ ಮಹಿಳೆಯರಿಗೆ 2025-26ನೇ ಸಾಲಿನ ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿ ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಅತ್ಮಸ್ಥೆರ್ಯದಿಂದ ಹೋರಾಡಿ ಇತರರ ಪ್ರಾಣ ಕಾಪಾಡಿದ ಮಹಿಳೆಯರನ್ನು ಗುರುತಿಸಿ ವೀರ ಮಹಿಳಾ ಪ್ರಶಸ್ತಿಗಳನ್ನು (Awards) ನೀಡಲು ಅರ್ಜಿ ಆಹ್ವಾನಿಸಿದೆ. (ಈ ಸುದ್ದಿಯನ್ನು ಇನ್ನು 36 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಇದನ್ನೂ ಓದಿ » ಗ್ಯಾರಂಟಿ ಯೋಜನೆಗಳು ಚುನಾವಣೆ ಲಕ್ಷ್ಮಿ, ಶಿವಮೊಗ್ಗದಲ್ಲಿ ವಿಜಯೇಂದ್ರ ವಿಶ್ಲೇಷಣೆ, ಏನಿದು?

ಆಸಕ್ತರು ಅರ್ಜಿಯನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, 100 ಅಡಿ ರಸ್ತೆ, ಆಲ್ಗೊಳ, ಶಿವಮೊಗ್ಗ ಇವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಡಿ. 22ರ ಒಳಗೆ ಸಲ್ಲಿಸಬೇಕು ಎಂದು ಇಲಾಖೆ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ದೂ. 08182-295514 ಸಂಪರ್ಕಿಸಬಹುದು.

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Shimoga-News-update

Leave a Comment