ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 14 NOVEMBER 2023
SHIMOGA : ಕರ್ನಾಟಕ ಹಾಲು ಮಹಾಮಂಡಳಿಯು ರೈತರಿಂದ ನೇರವಾಗಿ ಮೆಕ್ಕೆಜೋಳವನ್ನು (Maize) ಪ್ರತಿ ಕ್ವಿಂಟಲ್ಗೆ 2,250 ರೂ. ಬೆಲೆಗೆ ಖರೀದಿಸುವ ಪ್ರಕ್ರಿಯೆ ಆರಂಭಿಸಿದೆ.
ರೈತರು ಎಲ್ಲಿ ಸಂಪರ್ಕಿಸಬೇಕು?
ಮೆಕ್ಕೆಜೋಳ ಬೆಳೆದಿರುವ ರೈತರು ಸಮೀಪದ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ 1 ಕೆ.ಜಿಯಷ್ಟು ಮೆಕ್ಕೆಜೋಳದ ಮಾದರಿ ನೀಡಬೇಕು. ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಳ್ಳಬೇಕು.
30 ಸಾವಿರ ಮೆಟ್ರಿಕ್ ಟನ್ ಅಗತ್ಯ
ಕರ್ನಾಟಕ ಹಾಲು ಮಹಾಮಂಡಳದ ಶಿಕಾರಿಪುರ ಪಶು ಆಹಾರ ಘಟಕಕ್ಕೆ ಅವಶ್ಯವಿರುವ 30,000 ಮೆಟ್ರಿಕ್ ಟನ್ ಮೆಕ್ಕೆಜೋಳವನ್ನು (Maize) ಶಿವಮೊಗ್ಗ, ದಕ್ಷಿಣ ಕನ್ನಡ ಹಾಗೂ ದಾವಣಗೆರೆ ಜಿಲ್ಲಾ ವ್ಯಾಪ್ತಿಯ ರೈತರಿಂದ ಪ್ರಾಥಮಿಕ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಪ್ರಸ್ತುತ ಬಳಕೆ ಮಾಡುತ್ತಿರುವ ಕ್ಷೀರಸಿರಿ ಮತ್ತು ಕೃಷಿ ಇಲಾಖೆ ಸಿದ್ಧಪಡಿಸಿರುವ ಫ್ರೂಟ್ಸ್ ತಂತ್ರಾಂಶದ ಮೂಲಕ ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ಅನುಷ್ಠಾನಕ್ಕೆ ತರಲಾಗುತ್ತಿದೆ.
ಇದನ್ನೂ ಓದಿ- ಶಿವಮೊಗ್ಗ ನಗರದಲ್ಲಿ ಅಂಟಿಗೆ ಪಂಟಿಗೆ, ರಾತ್ರಿ ಪೂರ್ತಿ ಮನೆ ಮನೆಗೆ ತೆರಳಿ ಶುಭ ಹಾರೈಕೆ
ಪ್ರತಿ ರೈತರಿಂದ ಗರಿಷ್ಠ 10 ಕ್ವಿಂಟಲ್
ಪ್ರತಿ ರೈತರಿಂದ ಗರಿಷ್ಠ 10 ಕ್ವಿಂಟಲ್ ಮೆಕ್ಕೆಜೋಳ ಖರೀದಿಗೆ ಅವಕಾಶವಿದೆ. ಇದನ್ನು ಸದುಪಯೋಗಪಡಿಸಿಕೊಂಡು ರೈತರೇ ನೇರವಾಗಿ ಗುಣಮಟ್ಟದ ಮೆಕ್ಕೆಜೋಳವನ್ನು ತಲಾ 50 ಕೆ.ಜಿ ತೂಕದಂತೆ ಉತ್ತಮ ಗುಣಮಟ್ಟದ ಗೋಣಿಚೀಲಗಳಲ್ಲಿ ಸರಬರಾಜು ಮಾಡಬಹುದು. ಮಾಹಿತಿಗೆ 9606012571 ಸಂಪರ್ಕಿಸಬಹುದು ಎಂದು ಶಿಕಾರಿಪುರ ಹಾಲು ಮಂಡಳದ ಪಶು ಆಹಾರ ಘಟಕದ ಪ್ರಕಟಣೆ ತಿಳಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422