ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 14 DECEMBER 2022
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಶಿವಮೊಗ್ಗ : ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆಗೆ ಸರ್ಕಾರ ಬಂಡಾವಳ ಹೂಡಿಕೆ ಮಾಡಬೇಕು. ಕಾರ್ಖಾನೆಯನ್ನು ಖಾಸಗೀಕರಣ ಮಾಡಬಾರದು ಎಂದು ಆಗ್ರಹಿಸಿ ಸಿಐಟಿಯು ಸಂಘಟನೆ ವತಿಯಿಂದ ಮಂಡಿಯೂರಿ (kneel down) ವಿಭಿನ್ನವಾಗಿ ಪ್ರತಿಭಟನೆ ನಡೆಸಲಾಯಿತು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸಿಐಟಿಯು ಸಂಘಟನೆಯ ಪ್ರಮುಖರು ಮಂಡಿಯೂರಿ (kneel down) ಪ್ರತಿಭಟನೆ ನಡೆಸಿದರು.
ವಿಐಎಸ್ಎಲ್ ಕಾರ್ಖಾನೆಗೆ 800 ಕೋಟಿ ರೂ. ಬಂಡವಾಳ ಹೂಡಿಕೆ ಮಾಡುವುದಾಗಿ 2015ರಲ್ಲಿ ಕೇಂದ್ರ ಉಕ್ಕು ಸಚಿವ ನರೇಂದ್ರ ಸಿಂಗ್ ತೋಮರ್ ಭರವಸೆ ನೀಡಿದ್ದರು. 2018ರಲ್ಲಿ ಉಕ್ಕು ಸಚಿವರಾಗಿದ್ದ ಬೀರೇಂದ್ರ ಸಿಂಗ್ ಚೌದರಿ ಅವರು 6 ಸಾವಿರ ಕೋಟಿ ರೂ. ಬಂಡವಾಳ ಹೂಡಿಕೆಯ ಭರವಸೆ ನೀಡಿದ್ದರು. ಅದರಂತೆ ತಕ್ಷಣ ಬಂಡವಾಳ ಹೂಡಿಕೆ ಮಾಡಿ ಕಾರ್ಖಾನೆಯನ್ನು ಪುನಾರಂಭಿಸಬೇಕು.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ, ಪ್ರಮುಖ ಬದಲಾವಣೆ ಸೂಚಿಸಿದ ಕೇಂದ್ರದ ಅಧಿಕಾರಿಗಳು, ಏನದು?
ಸದ್ಯ ಕಾರ್ಖಾನೆಯಲ್ಲಿ ಒಂದು ಸಾವಾರಕ್ಕೂ ಹೆಚ್ಚು ಗುತ್ತಿಗೆ ಕಾರ್ಮಿಕರಿದ್ದಾರೆ. ಅವರಿಗೆ ಕೈ ತುಂಬ ಕೆಲಸವು ಇಲ್ಲ. ಸರಿಯಾಗಿ ವೇತನವು ಸಿಗುತ್ತಿಲ್ಲ. ಇದರಿಂದ ಕಾರ್ಮಿಕರ ಜೀವನ ದುಸ್ತರವಾಗಿದೆ. ಆದ್ದರಿಂದ ಕಾರ್ಖಾನೆಗೆ ಬಂಡವಾಳ ಹೂಡಿಕೆ ಮಾಡಿ, ಇನ್ನಷ್ಟು ಕಾರ್ಮಿಕರಿಗೆ ಕೆಲಸ ಕೊಡಬೇಕು. ಯಾವುದೆ ಕಾರಣಕ್ಕೂ ಕಾರ್ಖಾನೆಯನ್ನು ಖಾಸಗಿಕರಣ ಮಾಡಬಾರದು ಎಂದು ಆಗ್ರಹಿಸಿದರು.
ಸಿಐಟಿಯು ಸಂಘಟನೆ ಪ್ರಮುಖರಾದ ನಾರಾಯಣ, ಹನುಮಮ್ಮ, ಕೆ.ಎಲ್.ರಾವ್, ವೇಲು, ಮುನಿರಾಜು, ಜಯಮ್ಮ, ಭಾಗ್ಯಮ್ಮ ಸೇರಿದಂತೆ ಹಲವರು ಇದ್ದರು.