ಶಿವಮೊಗ್ಗ: ಸಂಸ್ಥೆಯ ಯಶಸ್ಸಿನ ಹಿಂದಿನ ನಿಜವಾದ ಶಕ್ತಿ ನಮ್ಮ ಗ್ರಾಹಕರಾಗಿದ್ದು, ಅವರ ವಿಶ್ವಾಸ, ಸಹಕಾರ ಮತ್ತು ಪ್ರೋತ್ಸಾಹವೇ ಸಂಸ್ಥೆಯನ್ನು ಇಂದಿನ ಮಟ್ಟಕ್ಕೆ ಬೆಳೆಸಿದೆ ಎಂದು ಕೊಡಚಾದ್ರಿ ಚಿಟ್ಸ್ ಪ್ರೈವೆಟ್ ಲಿಮಿಟೆಡ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಪರಶುರಾಮ್ ಕೆ.ಎನ್. ಹೇಳಿದರು.
ನಗರದ ರಾಯಲ್ ಆರ್ಕಿಡ್ ಹೋಟೆಲ್‌ನಲ್ಲಿ ಆಯೋಜಿಸಿದ್ದ ಅಭಿನಂದನ 2026-ಬಾಂಧವ್ಯದ ಬೆಸುಗೆ ಎಂಬ ವಿಶೇಷ ಗ್ರಾಹಕರ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಮುಂದಿನ ದಿನಗಳಲ್ಲೂ ಪಾರದರ್ಶಕ, ತಂತ್ರಜ್ಞಾನ ಆಧಾರಿತ ಹಾಗೂ ಗ್ರಾಹಕ ಸ್ನೇಹಿ ಸೇವೆಗಳನ್ನು ನೀಡುವ ಮೂಲಕ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಜನರ ಆರ್ಥಿಕ ಪ್ರಗತಿಗೆ ಸಂಸ್ಥೆ ಸದಾ ಕೈಜೋಡಿಸಲಿದೆ ಎಂದು ಭರವಸೆ ನೀಡಿದರು.

ಇದೇ ಸಂದರ್ಭ ಸಂಸ್ಥೆಯ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸಿರುವ ವಿವಿಧ ಭಾಗಗಳ ಗ್ರಾಹಕರನ್ನು ಸನ್ಮಾನಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಶಿವಮೊಗ್ಗ, ಹೊಸನಗರ, ಶಿಕಾರಿಪುರ, ತೀರ್ಥಹಳ್ಳಿ, ಚನ್ನಗಿರಿ, ತರೀಕೆರೆ ಹಾಗೂ ಹೊನ್ನಾಳಿ ಸೇರಿದಂತೆ ವಿವಿಧ ಶಾಖೆಗಳ ಗ್ರಾಹಕರು, ಗಣ್ಯರು ಹಾಗೂ ಸಂಸ್ಥೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.