ಶಿವಮೊಗ್ಗದಲ್ಲಿ ಮುಕ್ಕಾಲು ಭಾಗ ಮುಳುಗಿದ ಮಂಟಪ, ಡ್ಯಾಮ್‌ನಿಂದ ಮತ್ತಷ್ಟು ನೀರು ಹೊರಕ್ಕೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

NEWS HIGHLIGHTS

ಶಿವಮೊಗ್ಗ: ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರೆದಿದ್ದು ತುಂಗಾ ಜಲಾಶಯದ ಒಳ ಹರಿವು ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಹೆಚ್ಚುವರಿ ನೀರನ್ನು ಗಾಜನೂರಿನ ಡ್ಯಾಮ್‌ನಿಂದ ಹೊಳೆಗೆ ಹರಿಸಲಾಗುತ್ತಿದ್ದು, ತುಂಗಾ ನದಿ ಮೈದುಂಬಿದೆ. ಹಾಗಾಗಿ ಕೋರ್ಪಲಯ್ಯ ಛತ್ರ ಮಂಟಪ ಮುಕ್ಕಾಲು ಭಾಗ ಮುಳುಗಿದೆ.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಸದ್ಯ ತುಂಗಾ ಜಲಾಶಯದ 15 ಗೇಟ್‌ಗಳನ್ನು ಮೇಲೆತ್ತಲಾಗಿದೆ. ಅಂದಾಜು 20 ಸಾವಿರ ಕ್ಯೂಸೆಕ್‌ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಜಲಾನಯನ ಪ್ರದೇಶದಲ್ಲಿ ಮಳೆ ಜೋರಾಗಿದ್ದಾಗಿದೆ. ಹಾಗಾಗಿ ತುಂಗಾ ಜಲಾಶಯಕ್ಕೆ ಒಳ ಹರಿವು ಏರಿಕೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಈಗಾಗಲೇ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಹಂತಕ್ಕೆ ತಲುಪಿದೆ. ಹಾಗಾಗಿ ಬಂದ ನೀರನ್ನು ಹಾಗೆಯೇ ಹೊಳೆಗೆ ಹರಿಸಲಾಗುತ್ತಿದೆ.

unga-Mantapa-Half-Drowned-in-Shimoga

ಮುಕ್ಕಾಲು ಭಾಗ ಮುಳುಗಿದ ಮಂಟಪ

ಇನ್ನು, ಜಲಾಶಯದಿಂದ ಹೆಚ್ಚುವರಿ ನೀರು ಹೊಳೆಗೆ ಹರಿಸಲಾಗುತ್ತಿರುವ ಹಿನ್ನೆಲೆ ತುಂಗಾ ನದಿ ಮೈದುಂಬಿ ಹರಿಯುತ್ತಿದೆ. ಇದರಿಂದ ಶಿವಮೊಗ್ಗದ ಕೋರ್ಪಲಯ್ಯ ಛತ್ರ ಮಂಟಪ ಮುಕ್ಕಾಲು ಭಾಗ ನೀರಿನಲ್ಲಿ ಮುಳುಗಿದೆ. ಇದನ್ನು ಕಣ್ತುಂಬಿಕೊಳ್ಳಲು ಜನರು ಹೊಳೆ ದಂಡೆಗೆ ಆಗಮಿಸುತ್ತಿದ್ದಾರೆ. ಫೋಟೊ, ವಿಡಿಯೋಗಳನ್ನು ಕ್ಲಿಕ್ಕಿಸಿಕೊಂಡು ಸಂಭ್ರಮಿಸುತ್ತಿದ್ದಾರೆ.