SHIVAMOGGA LIVE NEWS | 22 ಮಾರ್ಚ್ 2022
ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆಗೆ ವಿದ್ಯುಕ್ತ ಚಾಲನೆ ಸಿಕ್ಕಿದೆ. ಬೆಳಗ್ಗೆಯಿಂದ ಗಾಂಧಿ ಬಜಾರ್’ನಲ್ಲಿ ಮಾರಿಕಾಂಬ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಜಾತ್ರೆ ಆರಂಭವಾಗಿದೆ.
ಸರಿದ ಪರದೆ, ಮೊಳಗಿದ ಘೋಷಣೆ
ಗಾಂಧಿ ಬಜಾರ್’ನಲ್ಲಿ ತಾಯಿಯ ತವರು ಮನೆ ಎಂಬ ನಂಬಿಕೆ ಇದೆ. ಈ ಹಿನ್ನೆಲೆಯಲ್ಲಿ ಗಾಂಧಿ ಬಜಾರ್’ನಲ್ಲಿ ಮಂಟಪ ನಿರ್ಮಿಸಿ ಶ್ರೀ ಮಾರಿಕಾಂಬ ದೇವಿಯನ್ನು ಪ್ರತಿಷ್ಠಾಪಿಸಲಾಗಿದೆ. ಪ್ರಥಮ ಪೂಜೆಗೂ ಮುನ್ನ ಪರದೆ ಸರಿಸಲಾಯಿತು. ಈ ಸಂದರ್ಭ ಭಕ್ತರು ಘೋಷಣೆಗಳನ್ನು ಮೊಗಳಗಿಸಿದರು.
ಪ್ರಥಮ ಪೂಜೆ, ಭಕ್ತರು ಪುನೀತ
ಬಿಬಿ ರಸ್ತೆಯ ಬ್ರಾಹ್ಮಣ ಸಮಾಜದ ನಾಡಿಗರ ಕುಟುಂಬವರು ಕೋಟೆ ಶ್ರೀ ಮಾರಿಕಾಂಬ ದೇವಿಗೆ ಪ್ರಥಮ ಪೂಜೆ ಸಲ್ಲಿಸಿದರು. ಮಂಗಳಾರತಿ ಬೆಳಗುತ್ತಿರುವುದನ್ನು ಕಂಡು ಭಕ್ತರು ಪುನೀತರಾದರು. ದೇವಿಗೆ ಪ್ರಾರ್ಥನೆ ಸಲ್ಲಿಸಿದರು.
ಹರಿದು ಬಂತು ಭಕ್ತ ಸಾಗರ
ತಾಯಿಯ ತವರು ಗಾಂಧಿ ಬಜಾರ್’ನಲ್ಲಿ ದರ್ಶನ ಪಡೆಯಲು ಭಕ್ತ ಸಾಗರ ಹರಿದು ಬಂದಿದೆ. ಬೆಳಗಿನ ಜಾವದಿಂದಲೇ ಸರತಿಯಲ್ಲಿ ನಿಂತಿರುವ ಜನರು, ದೇವಿಯ ದರ್ಶನ ಪಡೆಯುತ್ತಿದ್ದಾರೆ. ಯಾವುದೆ ಅಹಿತಕರ ಘಟನೆ ಸಂಭವಿಸದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಇದನ್ನೂ ಓದಿ | ಶಿವಮೊಗ್ಗ ಕೋಟೆ ಶ್ರೀ ಮಾರಿಕಾಂಬ ಜಾತ್ರೆ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ 15 ಪ್ರಮುಖ ವಿಚಾರ
ಇದನ್ನೂ ಓದಿ | ವಾಹನ ಸವಾರರೆ ಗಮನಿಸಿ, ಮಾರಿಕಾಂಬ ಜಾತ್ರೆ ಹಿನ್ನೆಲೆ ಶಿವಮೊಗ್ಗ ಸಿಟಿಯಲ್ಲಿ ರಸ್ತೆ ಸಂಚಾರದಲ್ಲಿ ಬದಲಾವಣೆ
ಈ ಮೇಲ್ – [email protected]
WhatsApp Number – 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200