ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 14 ಫೆಬ್ರವರಿ 2020
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಫೆಬ್ರವರಿ 25ರಿಂದ ಶಿವಮೊಗ್ಗದ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇವತ್ತು ದೇವಸ್ಥಾನದಲ್ಲಿ ಚಪ್ಪರ ಶಾಸ್ತ್ರ ನಡೆಯಿತು.
ಮಾರಿಕಾಂಬ ದೇವಿಯ ತವರು ಗಾಂಧಿ ಬಜಾರ್ ಮತ್ತು ಕೋಟೆ ಶ್ರೀ ಮಾರಿಕಾಂಬ ದೇವಸ್ಥಾನದಲ್ಲಿ ಈ ಶಾಸ್ತ್ರ ನಡೆಯಿತು. ದೇವಸ್ಥಾನದ ಆಡಳಿತ ಮಂಡಳಿ ಮತ್ತು ಭಕ್ತರು ಈ ವೇಳೆ ಉಪಸ್ಥಿತರಿದ್ದರು.
ಇದೇ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೋಟೆ ಶ್ರೀ ಮಾರಿಕಾಂಬ ಸೇವಾ ಸಮಿತಿ ಅಧ್ಯಕ್ಷ ಎಸ್.ಕೆ.ಮರಿಯಪ್ಪ, ಫೆಬ್ರವರಿ 25ರಿಂದ ಪ್ರಸಿದ್ಧ ಕೋಟೆ ಮಾರಿಕಾಂಬ ಜಾತ್ರೆ ನಡೆಯಲಿದೆ. ಮೊದಲೆಲ್ಲ ಮೂರು ದಿನ ಜಾತ್ರೆ ನಡೆಯುತ್ತಿತ್ತು. ಆದರೆ ಈಗ ಐದು ದಿನದ ಜಾತ್ರೆ ನಡೆಯಲಿದೆ. ದೊಡ್ಡ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಲಿದ್ದಾರೆ ಎಂದರು.
ಮೊದಲು ಸೀರೆ ಉಡಿಸುವುದಕ್ಕೆ ಸ್ಪರ್ಧೆ
ಜಾತ್ರೆ ವೇಳೆ ತಾಯಿಗೆ ಮೊದಲು ಸೀರೆ ಉಡಿಸುವುದು ಶ್ರೇಷ್ಠ ಎಂಬ ನಂಬಿಕೆ ಇದೆ. ಈ ಹಿನ್ನೆಲೆಯಲ್ಲಿ ಮೊದಲು ಸೀರೆ ಉಡಿಸಲು ಭಕ್ತರ ಮಧ್ಯೆ ಭಾರೀ ಪೈಪೋಟಿ ಏರ್ಪಟ್ಟಿದೆ ಎಂದು ತಿಳಿಸಿದ ಎಸ್.ಕೆ.ಮರಿಯಪ್ಪ, ಯಾರಿಗೆ ಆ ಭಾಗ್ಯ ಸಿಗಲಿದೆ ಎಂಬುದನ್ನು ತಾಯಿಯೆ ನಿರ್ಧರಿಸಲಿದ್ದಾಳೆ ಎಂದರು.
ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿ
ಜಾತ್ರೆ ಅಂಗವಾಗಿ ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿದೆ. ಫೆಬ್ರವರಿ 28 ರಿಂದ ಮಾರ್ಚ್ 1ರವರೆಗೆ ಪ್ರತಿದಿನ ಮಧ್ಯಾಹ್ನ 3 ಗಂಟೆಯಿಂದ ಕುಸ್ತಿ ಪಂದ್ಯಾವಳಿ ನಡೆಯಲಿದೆ. ರಾಜ್ಯ ಮತ್ತು ಹೊರ ರಾಜ್ಯದ ಪ್ರಸಿದ್ಧ ಪೈಲ್ವಾನರು ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ. ಇಲ್ಲಿ ಗೆಲುವು ಸಾಧಿಸುವವರಿಗೆ ಬೆಳ್ಳಿ ಗದೆ ಮತ್ತು 25 ಸಾವಿರ ರೂ. ಬಹುಮಾನ ಲಭಿಸಲಿದೆ ಎಂದು ದೇವಸ್ಥಾನದ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ತಿಳಿಸಿದರು.
ಸಮಿತಿ ಉಪಾಧ್ಯಕ್ಷರಾದ ಕೆ.ಎನ್.ಶ್ರೀನಿವಾಸ್, ಎನ್.ಉಮಾಪತಿ, ಕಾರ್ಯದರ್ಶಿ ಹನುಮಂತಪ್ಪ, ಕೋಶಾಧ್ಯಕ್ಷ ಹೆಚ್.ವಿ.ತಿಮ್ಮಪ್ಪ, ಕಾರ್ಯದರ್ಶಿ ಖಿಲ್ಲೇದಾರ್ ಸೀತಾರಾಮ್ ನಾಯಕ್, ಟಿ.ಎಸ್.ಚಂದ್ರಶೇಖರ್, ಸತ್ಯನಾರಾಯಣ್, ಪ್ರಭಾಕರಗೌಡ, ವಿ.ರಾಜು, ವಾಸುದೇವ್ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]