ಗಾಂಧಿ ಬಜಾರ್‌ನಲ್ಲಿ ಮಾರಿಕಾಂಬೆ ದರ್ಶನಕ್ಕೆ ಕ್ಷಣಗಣನೆ, ನೇರ ದರ್ಶನಕ್ಕೆ ಇದೆ ವಿಶೇಷ ವ್ಯವಸ್ಥೆ, ಹೇಗದು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 11 MARCH 2024

SHIMOGA : ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆಗೆ ಕ್ಷಣಗಣನೆ ಆರಂಭವಾಗಿದೆ. ಮಾ.12ರಂದು ತವರು ಮನೆ ಗಾಂಧಿ ಬಜಾರ್‌ನಲ್ಲಿ ದೇವಿ ದರ್ಶನ ನೀಡಲಿದ್ದಾಳೆ. ಇದಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಗಾಂಧಿ ಬಜಾರ್‌ನಲ್ಲಿ ಹೇಗಿರುತ್ತೆ ವ್ಯವಸ್ಥೆ?

POINT-1ಬೆಳಗಿನ ಜಾವ 5 ಗಂಟೆಗೆ ಬಿ.ಬಿ.ರಸ್ತೆಯ ಬ್ರಾಹ್ಮಣ ಸಮಾಜದ ನಾಡಿಗರ ಕುಟುಂಬದವರನ್ನು ಪೂಜೆಗೆ ಆಹ್ವಾನಿಸಲಾಗುತ್ತದೆ. ಆ ಕುಟುಂಬದ ಮುತ್ತೈದೆಯರು ಮಂಗಳ ವಾದ್ಯಗಳೊಂದಿಗೆ ದೇವಿಯ ತವರು ಮನೆ ಗಾಂಧಿ ಬಜಾರ್‌ವರೆಗೆ ಮೆರವಣಿಗೆಯಲ್ಲಿ ಆಗಮಿಸುತ್ತಾರೆ. ದೇವಿಗೆ ಬಾಸಿಂಗ ಅರ್ಪಿಸಿ, ಉಡಿ ತುಂಬಿ, ಪೂಜೆ ಸಲ್ಲಿಸುತ್ತಾರೆ. ವಿಶ್ವಕರ್ಮ ಸಮಾಜದವರು ಸಾರ್ವಜನಿಕವಾಗಿ ಪೂಜೆಯನ್ನು ಆರಂಭಿಸುತ್ತಾರೆ. ಲಕ್ಷಾಂತರ ಮುತ್ತೈದೆಯರು ಶ್ರೀ ಮಾರಿಕಾಂಬೆಗೆ ಮಡಲಕ್ಕಿ ನೀಡಿ, ಉಡಿ ತುಂಬಿ ತಮ್ಮ ಪೂಜೆ ಸಲ್ಲಿಸುತ್ತಾರೆ.

POINT-2ಗಾಂಧಿ ಬಜಾರ್‌ ತವರು ಮನೆಯಲ್ಲಿ ದೇವಿ ದರ್ಶನ ನೀಡಲಿದ್ದಾಳೆ. ಶ್ರೀ ಮಾರಿಕಾಂಬೆಯ ದರ್ಶನಕ್ಕೆ ಜನರು ದೊಡ್ಡ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಭಾರಿ ಬಿಸಿಲು ಇರುವುದರಿಂದ ಬಿ.ಹೆಚ್‌.ರಸ್ತೆಯವರೆಗೆ ಪೆಂಡಾಲ್‌ ಹಾಕಲಾಗಿದೆ. ದಾಹ ನೀಗಿಸಲು ಅಲ್ಲಲ್ಲಿ ನೀರು, ಮಜ್ಜಿಗೆಯ ವ್ಯವಸ್ಥೆ ಇರಲಿದೆ.

POINT-3ಗಾಂಧಿ ಬಜಾರ್‌ನಲ್ಲಿ ದೇವಿ ದರ್ಶನಕ್ಕೆ ತೆರಳುವ ಭಕ್ತರಿಗೆ 200 ರೂ. ವಿಶೇಷ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಗಾಂಧಿ ಬಜಾರ್‌ ಮಹಾದ್ವಾರದ ಬಳಿ ಟಿಕೆಟ್‌ ದೊರೆಯಲಿದೆ. ಪ್ರತಿ ಟಿಕೆಟ್‌ಗೆ ಇಬ್ಬರಿಗೆ ದರ್ಶನಕ್ಕೆ ಅವಕಾಶವಿರಲಿದೆ. ‘ಶೇ.30ರಷ್ಟು ಮಂದಿ ಈ ವಿಶೇಷ ದರ್ಶನದ ವ್ಯವಸ್ಥೆ ಅಡಿ ದರ್ಶನ ಪಡೆಯುವ ಸಾಧ್ಯತೆ ಇದೆʼ ಎಂದು ದೇವಸ್ಥಾನ ಸಮಿತಿ ಅಧ್ಯಕ್ಷ ಎಸ್‌.ಕೆ.ಮರಿಯಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

POINT-4‘ಬೆಳಗ್ಗೆ 8 ಗಂಟೆಯಿಂದ ವಿಶೇಷ ದರ್ಶನ ವ್ಯವಸ್ಥೆ ಶುರುವಾಗಲಿದೆ. ಈ ವ್ಯವಸ್ಥೆ ಅಡಿ ವಿಶೇಷ ಚೇತನರು ಮತ್ತು ತುಂಬು ಗರ್ಭಿಣಿಯರಿಗೆ ಉಚಿತ ಪ್ರವೇಶ ನೀಡಲಾಗುತ್ತದೆʼ ಎಂದು ದೇಗುಲ ಸಮಿತಿ ಕಾರ್ಯದರ್ಶಿ ಎನ್.ಮಂಜುನಾಥ್‌ ತಿಳಿಸಿದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ನಾಡ ಹಬ್ಬ ಮಾದರಿ ವಿದ್ಯುತ್ ದೀಪಾಲಂಕಾರ, ಎಲ್ಲೆಲ್ಲಿ ಹೇಗಿದೆ? ಇಲ್ಲಿದೆ ಫೋಟೊ ಮಾಹಿತಿ

POINT-5ಎಲ್ಲ ಭಕ್ತರು ದೇವಿಯನ್ನು ಕಣ್ತುಂಬಿಕೊಳ್ಳಲು ಅನುವಾಗುವಂತೆ ಈ ಬಾರಿ ವ್ಯವಸ್ಥೆ ಮಾಡಲಾಗಿದೆ. ದೇವಿಯ ಮುಂದೆ ಕೇವಲ ಇಬ್ಬರು ಸೇವಾಕರ್ತರಿಗೆ ಮಾತ್ರ ಅವಕಾಶವಿರಲಿದೆ. ಉಳಿದಂತೆ ಪೊಲೀಸ್‌ ಭದ್ರತೆ ಇರಲಿದೆ. ಇನ್ನು, ಗಾಂಧಿ ಬಜಾರ್‌ನಾದ್ಯಂತ ಅಲ್ಲಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಮಫ್ತಿಯಲ್ಲಿಯು ಪೊಲೀಸರನ್ನು ನಿಯೋಜಿಸಲಾಗಿದೆ. ‘ಈಗಾಗಲೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್ ನೇತೃತ್ವದಲ್ಲಿ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾ ರಕ್ಷಣಾಧಿಕಾರಿ ಅವರು ಎರಡು ಬಾರಿ ದೇಗುಲಕ್ಕೆ ಭೇಟಿ ನೀಡಿ ಭದ್ರತೆ ಕುರಿತು ಚರ್ಚೆ ನಡೆಸಿದ್ದಾರೆʼ ಎಂದು ಎನ್‌.ಮಂಜುನಾಥ್‌ ತಿಳಿಸಿದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 11, 2024

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment