SHIVAMOGGA LIVE NEWS | 12 MARCH 2024
SHIMOGA : ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆಗೆ ವಿದ್ಯುಕ್ತ ಚಾಲನೆ ಸಿಕ್ಕಿದೆ. ಬೆಳಗ್ಗೆಯಿಂದ ಗಾಂಧಿ ಬಜಾರ್ನಲ್ಲಿ ಸಹಸ್ರಾರು ಭಕ್ತರು ಮಾರಿಕಾಂಬ ದೇವಿಯ ದರ್ಶನ ಪಡೆದು, ಪೂಜೆ ಸಲ್ಲಿಸುತ್ತಿದ್ದಾರೆ.
ಮೂರನೆ ಪ್ಯಾರಾ ಈ ಜಾಹೀರಾತಿನ ಕೆಳಗಿದೆ


ಸರಿದ ಪರದೆ, ಮೊಳಗಿದ ಘೋಷಣೆ
ತವರು ಮನೆ ಗಾಂಧಿ ಬಜಾರ್ನಲ್ಲಿ ಮಂಟಪ ನಿರ್ಮಿಸಿ ಶ್ರೀ ಮಾರಿಕಾಂಬ ದೇವಿಯನ್ನು ಪ್ರತಿಷ್ಠಾಪಿಸಲಾಗಿದೆ. ಪ್ರಥಮ ಪೂಜೆಗೂ ಮುನ್ನ ಪರದೆ ಸರಿಸಲಾಯಿತು. ಈ ಸಂದರ್ಭ ಭಕ್ತರು ಘೋಷಣೆಗಳನ್ನು ಮೊಗಳಗಿಸಿದರು.
ಪ್ರಥಮ ಪೂಜೆ, ಭಕ್ತರು ಪುನೀತ
ಬಿಬಿ ರಸ್ತೆಯ ಬ್ರಾಹ್ಮಣ ಸಮಾಜದ ನಾಡಿಗರ ಕುಟುಂಬವರು ಕೋಟೆ ಶ್ರೀ ಮಾರಿಕಾಂಬ ದೇವಿಗೆ ಪ್ರಥಮ ಪೂಜೆ ಸಲ್ಲಿಸಿದರು. ಮಂಗಳಾರತಿ ಬೆಳಗುತ್ತಿರುವುದನ್ನು ಕಂಡು ಭಕ್ತರು ಪುನೀತರಾದರು. ದೇವಿಗೆ ಪ್ರಾರ್ಥನೆ ಸಲ್ಲಿಸಿದರು.

ಹರಿದು ಬಂತು ಭಕ್ತ ಸಾಗರ
ತಾಯಿಯ ತವರು ಗಾಂಧಿ ಬಜಾರ್ನಲ್ಲಿ ದರ್ಶನ ಪಡೆಯಲು ಭಕ್ತ ಸಾಗರ ಹರಿದು ಬಂದಿದೆ. ಬೆಳಗಿನ ಜಾವದಿಂದಲೇ ಸರತಿಯಲ್ಲಿ ನಿಂತಿರುವ ಜನರು, ದೇವಿಯ ದರ್ಶನ ಪಡೆಯುತ್ತಿದ್ದಾರೆ. ಯಾವುದೆ ಅಹಿತಕರ ಘಟನೆ ಸಂಭವಿಸದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಗಣ್ಯರು ಭೇಟಿ, ಪೂಜೆ
ಮಾರಿಕಾಂಬ ದೇವಿಯ ದರ್ಶನ ಪಡೆಯಲು ಜಿಲ್ಲೆಯ ಗಣ್ಯರು ಆಗಮಿಸುತ್ತಿದ್ದಾರೆ. ಸಂಸದ ಬಿ.ವೈ.ರಾಘವೇಂದ್ರ ಅವರು ದೇವಿಯ ದರ್ಶನ ಪಡೆದರು. ಇದೇ ವೇಳೆ ಸರತಿಯಲ್ಲಿ ನಿಂತಿದ್ದ ಜನರು ಸಂದರ ರಾಘವೇಂದ್ರ ಅವರಿ ಹಸ್ತಲಾಘವ ಮಾಡಿ, ಸೆಲ್ಫಿ ಕ್ಲಿಕ್ಕಿಸಿಕೊಂಡರು. ಬಿಸಿಲಿನ ಝಳ ಹೆಚ್ಚಿರುವುದರಿಂದ ಅಲ್ಲಲ್ಲಿ ಮಜ್ಜಿಗೆ ಮತ್ತು ನೀರಿನ ವ್ಯವಸ್ಥೆ ಮಾಡಲಾಗಿದೆ. ಸಂಸದ ಬಿ.ವೈ.ರಾಘವೇಂದ್ರ ಅವರು ಭಕ್ತರಿಗೆ ಮಜ್ಜಿಗೆ ವಿತರಿಸಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ನಾಡ ಹಬ್ಬ ಮಾದರಿ ವಿದ್ಯುತ್ ದೀಪಾಲಂಕಾರ, ಎಲ್ಲೆಲ್ಲಿ ಹೇಗಿದೆ? ಇಲ್ಲಿದೆ ಫೋಟೊ ಮಾಹಿತಿ






