ಶಿವಮೊಗ್ಗ ಲೈವ್
ಶಿವಮೊಗ್ಗ : ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕ (Priest) ಅನಂತರಾಮ ಅಯ್ಯಂಗಾರ್ ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆ ಅವರು ನಿಧನರಾಗಿದ್ದಾರೆ. (ಈ ಸುದ್ದಿಯನ್ನು ಇನ್ನು 43 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿರುವ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇಂದು ಮಧ್ಯಾಹ್ನ ರೋಟರಿ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ. ಅನಂತರಾಮ ಅಯ್ಯಂಗಾರ್ (Priest) ಅವರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಶ್ರೀ ಕೋಟೆ ಸೀತಾರಾಮ ಆಂಜನೇಯ ದೇವಾಲಯದ ಪ್ರಧಾನ ಅರ್ಚಕರಾದ ಪೂಜ್ಯ ಅನಂತರಾಮ್ ಅಯ್ಯಂಗಾರ್ ಅವರು ನಿಧನರಾಗಿರುವ ಸುದ್ದಿ ತಿಳಿದು ದುಃಖವಾಗಿದೆ. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ ಹಾಗೂ ಅವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ.
– ಬಿ.ವೈ.ರಾಘವೇಂದ್ರ, ಶಿವಮೊಗ್ಗ ಸಂಸದ
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ


