ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS
SHIMOGA | ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ಕೋಟಿ ಕಂಠ ಗಾಯನದಲ್ಲಿ ಶಿವಮೊಗ್ಗದ ಸಾರ್ವಜನಿಕರು, ವಿದ್ಯಾರ್ಥಿಗಳು, ಅಧಿಕಾರಿಗಳು, ರಾಜಕಾರಣಿಗಳು ಕನ್ನಡ ಗೀತೆಗಳಿಗೆ ಧ್ವನಿಯಾದರು. (koti kanta gayana)
ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಕೋಟಿ ಕಂಠ ಗಾಯನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ, ಶಾಸಕ ಕೆ.ಎಸ್.ಈಶ್ವರಪ್ಪ, ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ಜಿಲ್ಲಾಧಿಕಾರಿ ಡಾ. ಸೆಲ್ವಮಣಿ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ಜಿಲ್ಲಾ ಪಂಚಾಯತ್ ಸಿಇಓ ಎನ್.ಡಿ.ಪ್ರಕಾಶ್, ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಡಿಗೆ ಧ್ವನಿಗೂಡಿಸಿದರು.
(koti kanta gayana)
ಕನ್ನಡದ ಹಾಡುಗಳಿಗೆ ಕಂಠ ಸೇರಿಸಿದರು
ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಎಲ್ಲರು ಕನ್ನಡ ಹಾಡುಗಳಿಗೆ ಧ್ವನಿಯಾದರು. ನಾಡಗೀತೆ, ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಬಾರಿಸು ಕನ್ನಡ ಡಿಂಡಿಮವ, ಹಚ್ಚೇವು ಕನ್ನಡದ ದೀಪ, ವಿಶ್ವ ವಿನೂತನ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡುಗಳನ್ನು ಹಾಡಲಾಯಿತು.
ಕಾರ್ಯಕ್ರಮದಲ್ಲಿ ಕನ್ನಡ ಸಂಕಲ್ಪ ವಿಧಿಯನ್ನು ಬೋಧಿಸಲಾಯಿತು. ಜಿಲ್ಲಾಡಳಿತ ಕಚೇರಿ ಆವರಣದಲ್ಲಿ ಶಿವಮೊಗ್ಗದ ಅರುಣ್ ಮತ್ತು ತಂಡ ಇವರು ಕಾರ್ಯಕ್ರಮ ನಡೆಸಿಕೊಟ್ಟರು.
(koti kanta gayana)
ಜಿಲ್ಲೆಯಾದ್ಯಂತ ಕೋಟಿ ಕಂಠ ಗಾಯನ
ಜಿಲ್ಲಾಧಿಕಾರಿಗಳ ಕಚೇರಿ ಆವರಣ, ಜೋಗ ಜಲಪಾತ ಎದುರು, ಭದ್ರಾವತಿ ನರಸಿಂಹಸ್ವಾಮಿ ದೇವಸ್ಥಾನ ಎದುರು, ಹೊಸನಗರ ತಾಲೂಕು ನಗರದ ಬಿದನೂರು ಕೋಟೆ ಎದುರು, ತೀರ್ಥಹಳ್ಳಿ ಕುಪ್ಪಳಿಯ ಕುವೆಂಪು ಮನೆ, ಶಿವಮೊಗ್ಗದ ಶಾಹಿ ಗಾರ್ಮೆಂಟ್ಸ್, ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯ, ಶಿವಮೊಗ್ಗದ ಸಹ್ಯಾದ್ರಿ ಕಾಲೇಜು, ಸೇರಿದಂತೆ ದೇಶೀಯ ವಿದ್ಯಾಶಾಲೆ, ಪಿಇಎಸ್ ಕಾಲೇಜು, ಜವಾಹರಲಾಲ್ ನೆಹರು ತಾಂತ್ರಿಕ ಕಾಲೇಜು, ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಹಾಗೂ ಇತರೆ ವಿದ್ಯಾಲಯಗಳಲ್ಲಿಯೂ ಸಹ ಕೋಟಿ ಕಂಠ ಗಾಯನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಜಿಲ್ಲೆಯಲ್ಲಿ ಕೋಟಿ ಕಂಠ ಗಾಯನಕ್ಕಾಗಿ ಒಟ್ಟು 3.33 ಲಕ್ಷ ಜನರು ಆನ್ಲೈನ್ನಲ್ಲಿ ನೋಂದಾಯಿಸಿಕೊಂಡಿದ್ದರು.
ಕ್ಲಿಕ್ ಮಾಡಿ ಇದನ್ನೂ ಓದಿ | ಹೈಟೆಕ್ ತಂತ್ರಜ್ಞಾನ, ಅನುಮಾನ ಬಂದರೆ ಬೆರಳಚ್ಚು ಪಡೆಯುತ್ತಾರೆ ಶಿವಮೊಗ್ಗ ಪೊಲೀಸ್, ಯಾಕೆ?
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422