SHIVAMOGGA LIVE NEWS | 6 SEPTEMBER 2023
SHIMOGA : ಶ್ರೀಕೃಷ್ಣ (Krishna) ನಮ್ಮೆಲ್ಲರ ಆರಾಧ್ಯ ದೈವ. ಇಡೀ ಜಗತ್ತಿಗೆ ಬೆಳಕನ್ನು ನೀಡಿ, ಧರ್ಮ ನಿಷ್ಠೆಯಿಂದ ಬದುಕಬೇಕೆಂದು ಹೇಳಿಕೊಟ್ಟವನು ಕೃಷ್ಣ ಎಂದು ಶಿವಮೊಗ್ಗ ನಗರ ಕ್ಷೇತ್ರ ಶಾಸಕರಾದ ಎಸ್.ಎನ್. ಚನ್ನಬಸಪ್ಪ ಹೇಳಿದರು.
ನಗರದ ಕುವೆಂಪು ರಂಗಮಂದಿರದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಗೊಲ್ಲರ(ಯಾದವ) ಸಂಘ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಶ್ರೀ ಕೃಷ್ಣ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಗೋ ಸಂರಕ್ಷಣೆಗೆ ಸಂಪೂರ್ಣವಾಗಿ ಶಕ್ತಿ ಕೊಟ್ಟವನು ಶ್ರೀಕೃಷ್ಣ. ಈ ಸಮಾಜಕ್ಕೆ ಮಾತ್ರ ದೇವರಲ್ಲ, ಇಡೀ ಪ್ರಪಂಚಕ್ಕೆ ದೇವರು. ಒಳ್ಳೆ ಸಂಗತಿಗಳನ್ನು ಯೋಚನೆ ಮಾಡುತ್ತಾ ಮೈಗೂಡಿಸಿಕೊಳ್ಳಬೇಕು. ನಿಸ್ವಾರ್ಥತೆಯಿಂದ ಕೆಲಸವನ್ನು ಮಾಡು ಅದರ ಫಲ ನನಗೆ ಬಿಡು, ಅದಕ್ಕೆ ದಕ್ಕಬೇಕಾದ ಫಲ ದಕ್ಕುತ್ತದೆ ಎಂಬ ಕೃಷ್ಣನ ಮಾತಿನಂತೆ ಧರ್ಮ ನಿಷ್ಠೆಯಿಂದ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಹೇಳಿದರು.
ಇದನ್ನೂ ಓದಿ – ಶಿವಮೊಗ್ಗದಿಂದ ಕನೆಕ್ಟಿಂಗ್ ವಿಮಾನ ಹಾರಾಟಕ್ಕೆ ಗ್ರೀನ್ ಸಿಗ್ನಲ್, ಕೆಲವೆ ತಿಂಗಳಲ್ಲಿ ಬರಲಿದೆ ವಂದೇ ಭಾರತ್ ಎಕ್ಸ್ಪ್ರೆಸ್
ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಕನ್ನಡ ವಿಭಾಗದ ಪ್ರಾಧ್ಯಾಪಕರಾದ ಡಾ.ಜಿ.ಕೆ ಪ್ರೇಮ ಮಾತನಾಡಿ, ಕೃಷ್ಣನಲ್ಲಿ ಅಪಾರ ಸಾಹಸ ಶಕ್ತಿ ಇದ್ದು ಕಾಳಿಂಗ ಸರ್ಪದ ಉಪಟಳದಿಂದ ಜನರನ್ನು ರಕ್ಷಿಸುತ್ತಾನೆ. ಮನಸ್ಸಿನಲ್ಲಿಯೇ ಲೋಕವನ್ನು ಅವಲೋಕನ ಮಾಡಿಕೊಳ್ಳುವ ಕೃಷ್ಣ, ಸುಧಾಮನ ಕಷ್ಟಗಳನ್ನು ನಿವಾರಿಸುತ್ತಾನೆ. ಸತ್ಯಭಾಮೆಯ ಅತ್ಯಂತ ಸರಳ ಭಕ್ತಿಯನ್ನು ಮೆಚ್ಚಿ ತುಳಸಿ ದಳಕ್ಕೆ ಶ್ರೀಕೃಷ್ಣ ಪರಮಾತ್ಮ ಒಲಿಯುತ್ತಾನೆ. ಅವನ ವಿಶೇಷ ವ್ಯಕ್ತಿತ್ವವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಗೊಲ್ಲರ ಸಂಘದ ಅಧ್ಯಕ್ಷ ಕೆ.ಅಂಜನಪ್ಪ, ತಾಲ್ಲೂಕು ಗೊಲ್ಲರ ಸಂಘದ ಅಧ್ಯಕ್ಷ ಎಸ್.ಹೆಚ್.ಜಗದೀಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್.ಹೆಚ್, ಧರ್ಮ ಪ್ರಸಾದ್, ರಮೇಶ್ ಮತ್ತಿತ್ತರರು ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200