ಶಿವಮೊಗ್ಗ ಲೈವ್
SHIVAMOGGA LIVE NEWS, 30 JANUARY 2025 (ಈ ಸುದ್ದಿಯನ್ನು ಇನ್ನು 41 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಭದ್ರಾವತಿ : ನಗರಸಭೆ ವ್ಯಾಪ್ತಿಯಲ್ಲಿ ಪಾದಚಾರಿ ರಸ್ತೆ (Road) ಅಭಿವೃದ್ಧಿಯ ಹೆಸರಲ್ಲಿ ಕಳಪೆ ಹಾಗೂ ಅಸಮರ್ಪಕ ಕಾಮಗಾರಿ ನಡೆಸಲಾಗುತ್ತಿದೆ ಎಂದು ಆರೋಪಿಸಿ ಕೆ.ಆರ್.ಎಸ್ ಪಕ್ಷದ ತಾಲ್ಲೂಕು ಘಟಕದ ವತಿಯಿಂದ ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
3.15 ಕೋಟಿ ರೂ. ಮೊತ್ತದ ಕಾಮಗಾರಿಯು ಗುಣಮಟ್ಟದಿಂದ ಕೂಡಿಲ್ಲ. ಸಾರ್ವಜನಿಕರ ತೆರಿಗೆ ಹಣ ಪೋಲಾಗದಂತೆ ಉತ್ತಮ ರೀತಿಯಲ್ಲಿ ಕಾಮಗಾರಿ ನಡೆಸಲು ಗುತ್ತಿಗೆದಾರರಿಗೆ ಸೂಚಿಸಬೇಕು
ತೀರ್ಥೇಶ್, ಕೆ.ಆರ್.ಎಸ್. ಪಕ್ಷ ತಾಲೂಕು ಅಧ್ಯಕ್ಷ
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ


ಪೌರಾಯುಕ್ತರು ಮತ್ತು ನಗರಸಭೆ ಅಧ್ಯಕ್ಷರಿಗೆ ಮನವಿ ಸಲ್ಲಿಸಲಾಯಿತು. ಕೆಆರ್ಎಸ್ ಪಕ್ಷದ ರೈತ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ಶರತ್, ಭಂಡಾರ ಹಳ್ಳಿ ಕಿರಣ್, ಕಬಳಿಕಟ್ಟೆ ಮಂಜುನಾಥ್, ಪ್ರಶಾಂತ್ ಮತ್ತಿತರರು ಪಾಲ್ಗೊಂಡಿದ್ದರು.
ಇದನ್ನೂ ಓದಿ » ರಿಪ್ಪನ್ಪೇಟೆ ಸೇರಿ ಸುತ್ತಮುತ್ತಲು ಇವತ್ತು ಇಡೀ ದಿನ ಕರೆಂಟ್ ಇರಲ್ಲ, ಯಾಕೆ?