ಪಿಎಫ್ಐ ಸಂಘಟನೆ ನಿಷೇಧ, ಶಿವಮೊಗ್ಗದಲ್ಲಿ ಈಶ್ವರಪ್ಪ ಪ್ರತಿಕ್ರಿಯೆ, ಹೇಳಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಇವತ್ತು ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಕ್ರಾಂತಿಕಾರಿ ಭಗತ್ ಸಿಂಗ್ ಅವರ ಹುಟ್ಟುಹಬ್ಬ. ರಾಷ್ಟ್ರದ್ರೋಹಿ ಚಟುವಟಿಕೆ ಮಾಡುತ್ತಿದ್ದ ಪಾಪ್ಯೂಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಯನ್ನು ಇದೆ ದಿನ ನಿಷೇಧ (BAN) ಮಾಡಿರುವುದು ಭಗತ್ ಸಿಂಗ್ ಅವರ ಆತ್ಮಕ್ಕೆ ಶಾಂತಿ ಸಿಗುವಂತಹ ಬೆಳವಣಿಗೆಯಾಗಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.

Shimoga Nanjappa Hospital

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್.ಈಶ್ವರಪ್ಪ ಅವರು, ಪಿಎಫ್ಐ ಸಂಘಟನೆ ಕಾನೂನು ಬಾಹಿರ ಚಟುವಟಿಕೆ, ಉಗ್ರರ ಜೊತೆ ಸಂಬಂಧ, ಹತ್ಯೆ, ಹವಾಲ ದಂಧೆ, ವಿದೇಶದಿಂದ ಆರ್ಥಿಕ ನೆರವು ಪಡೆದುಕೊಂಡಿದೆ. ಇವುಗಳ ಜೊತೆಗೆ ಸಾಕಷ್ಟು ಹಿಂದೂ ಯುವಕರ ಹತ್ಯೆ ಮಾಡುತ್ತಿದ್ದರು. ಈ ಸಂಘಟನೆಯನ್ನು ನಿಷೇಧ (BAN) ಮಾಡಿರುವುದು ಎಲ್ಲಾ ರಾಷ್ಟ್ರಪ್ರೇಮಿಗಳಿಗೆ ಸಮಾಧಾನವಾಗಿದೆ ಎಂದು ತಿಳಿಸಿದರು.

ಬೇರೆ ಹೆಸರಲ್ಲಿ ಬಂದರು ಮಟ್ಟ ಹಾಕ್ತೀವಿ (BAN)

ಪಿಎಫ್ಐ ಸಂಘಟನೆ ನಿಷೇಧ ಕುರಿತು ರಾಜ್ಯ ಸರ್ಕಾರಗಳು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಬೇಕು. ಅವರ ದೇಶದ್ರೋಹಿ ಚಟುವಟಿಕೆಗಳ ಕುರಿತು ತಿಳಿಸಬೇಕು. ನಮ್ಮ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತ್ತು. ಈಗ ಪಿಎಫ್ಐ ಸಂಘಟನೆ ನಿಷೇಧವಾಗಿದೆ. ಹಾಗೆಂದು ಬೇರೆ ಹೆಸರಿನಲ್ಲಿ ಚಟುವಟಿಕೆ ಮುಂದುವರೆಸಿದರೆ ಅದನ್ನೂ ಮಟ್ಟ ಹಾಕಲಾಗುತ್ತದೆ ಎಂದು ಈಶ್ವರಪ್ಪ ತಿಳಿಸಿದರು.

ಸಿದ್ದರಾಮಯ್ಯ ಸವಾಲು ಹಾಕಿದ್ದರು (BAN)

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ ಆಗ ನಾನು ಪರಿಷತ್ತಿನ ವಿರೋಧ ಪಕ್ಷದ ನಾಯಕನಾಗಿದ್ದೆ. ವಿಧಾನ ಪರಿಷತ್ತಿನಲ್ಲಿ ಪಿಎಫ್ಐ ನಿಷೇಧದ ವಿಚಾರ ಪ್ರಸ್ತಾಪವಾಗಿತ್ತು. ಆಗ ಸಿದ್ದರಾಮಯ್ಯ ಅವರು, ‘ಕೇಂದ್ರದಲ್ಲಿ ನಿಮ್ಮದೆ ಸರ್ಕಾರವಿದೆ. ಪಿಎಫ್ಐ ಸಂಘಟನೆಯನ್ನು ನಿಷೇಧ ಮಾಡಿಸಿ’ ಎಂದಿದ್ದರು. ಈಗ ನಮ್ಮ ರಾಜ್ಯ ಸರ್ಕಾರ ಪ್ರಸ್ತಾವನೆ ಕಳುಹಿಸಿದ್ದು ಪಿಎಫ್ಐ ಸಂಘಟನೆಯನ್ನು ನಿಷೇಧಿಸಲಾಗಿದೆ ಎಂದರು.

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗ, ಭದ್ರಾವತಿಯಲ್ಲಿ ಪೊಲೀಸರ ದಾಳಿ, ಐವರ ಬಂಧನ, ಕಾರಣ ಬಿಚ್ಚಿಟ್ಟ ಗೃಹ ಸಚಿವರು

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment