ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 21 JUNE 2021
ಕರೋನ ಮತ್ತು ಲಾಕ್ ಡೌನ್‍ನಿಂದಾಗಿ ಸ್ಥಗಿತವಾಗಿದ್ದ KSRTC ಬಸ್ ಸಂಚಾರ ಪುನಾರಂಭವಾಗಿದೆ. ಶಿವಮೊಗ್ಗ ಜಿಲ್ಲೆಯಿಂದಲೂ ಸರ್ಕಾರಿ ಸಾರಿಗೆ ಸೇವೆ ರಸ್ತೆಗಿಳಿದಿವೆ.
ಎರಡು ತಿಂಗಳು ಡಿಪೋದಲ್ಲಿದ್ದ ಬಸ್ಸುಗಳನ್ನು ಸ್ವಚ್ಛಗೊಳಿಸಿ, ಸ್ಯಾನಿಟೈಸ್ ಮಾಡಿ, ನಿಲ್ದಾಣಕ್ಕೆ ತರಲಾಗಿದೆ. ಪ್ರಯಾಣಿಕರ ಆದ್ಯತೆಗೆ ಅನುಗುಣವಾಗಿ ಬಸ್ ಸಂಚಾರ ಶುರು ಮಾಡಲಾಗಿದೆ.
ಶೇ.50ರಷ್ಟು ಪ್ರಯಾಣಿಕರು
ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ ಶೇ.50ರಷ್ಟು ಪ್ರಯಾಣಿಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತಿದೆ. ಪ್ರತಿ ಸೀಟಿಗೆ ಒಬ್ಬರಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತಿದೆ.
ಎಲ್ಲೆಲ್ಲಿಗೆ ಬಸ್ ಸಂಚಾರ ಶುರು
ಶಿವಮೊಗ್ಗದಿಂದ ಹಲವು ಮಾರ್ಗಗಳಿಗೆ ಬಸ್ ಸಂಚಾರ ಆರಂಭಿಸಲಾಗಿದೆ. ಬೆಂಗಳೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಉಡುಪಿ, ಮಂಗಳೂರು, ತುಮಕೂರು, ಶಿಕಾರಿಪುರ, ಸಾಗರ, ಹೊಸನಗರ, ಭದ್ರಾವತಿ, ತೀರ್ಥಹಳ್ಳಿ, ಸೊರಬ, ಹರಿಹರ, ಕಡೂರು, ತರೀಕೆರೆ, ಚನ್ನಗಿರಿಗೆ ಬಸ್ ಸಂಚಾರ ಆರಂಭವಾಗಿದೆ. ಸುಮಾರು 150 ಬಸ್ಸುಗಳು ರಸ್ತೆಗಿಳಿದಿವೆ.
ಸರ್ಕಾರದ ಆದೇಶದ ಹಿನ್ನೆಲೆ KSRTC ಬಸ್ ಸಂಚಾರ ಆರಂಭಿಸಲಾಗಿದೆ. ತಾಲೂಕು ಮತ್ತು ಆಯ್ದ ಜಿಲ್ಲಾ ಕೇಂದ್ರಗಳಿಗೆ ಸಂಚಾರ ಆರಂಭವಾಗಿದೆ. ಪ್ರಯಾಣಿಕರ ಆದ್ಯತೆ ಮೇರೆಗೆ ಗ್ರಾಮೀಣ ಭಾಗಕ್ಕೆ ಸಂಚಾರ ಕಲ್ಪಿಸಲಾಗುತ್ತದೆ ಎಂದು ಶಿವಮೊಗ್ಗ KSRTC ವಿಭಾಗೀಯ ಡಿಸಿ ನವೀನ್ ಕುಮಾರ್ ತಿಳಿಸಿದ್ದಾರೆ.
ಬಣಗುಡುತ್ತಿದೆ ಖಾಸಗಿ ನಿಲ್ದಾಣ
ಸರ್ಕಾರಿ ಸಾರಿಗೆ ಬಸ್ ಸಂಚಾರ ಆರಂಭವಾಗಿದೆ. ಆದರೆ ಜಲ್ಲೆಯ ಜೀವನಾಡಿಯಾಗಿರುವ ಖಾಸಗಿ ಬಸ್ ಸಂಚಾರ ಶುರುವಾಗಿಲ್ಲ. ಹಾಗಾಗಿ ಖಾಸಗಿ ಬಸ್ ನಿಲ್ದಾಣ ಬಣಗುಡುತ್ತಿದೆ. ಇನ್ನು, ಶಿವಮೊಗ್ಗದ ಸಿಟಿ ಬಸ್ಸುಗಳು ಕೂಡ ರಸ್ತೆಗಿಳಿಯಲು ಅವಕಾಶ ನೀಡಿಲ್ಲ. ಸದ್ಯ KSRTC ಬಸ್ ಸಂಚಾರ ಆರಂಭವಾಗಿರುವುದರಿಂದ ದೂರದ ಊರುಗಳಿಗೆ ತೆರಳುವವರು ನಿಟ್ಟುಸಿರು ಬಿಡುವಂತಾಗಿದೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422