ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ಜುಲೈ 2020
ಹಳೆ ಶಿವಮೊಗ್ಗ ಭಾಗವನ್ನು ಜುಲೈ 23ರಿಂದ ಸಂಪೂರ್ಣ ಸೀಲ್ ಡೌನ್ ಮಾಡಲಾಗುತ್ತಿದೆ. ಸೀಲ್ ಡೌನ್ ಸಂಬಂಧ ಮಹಾನಗರ ಪಾಲಿಕೆ ಹೊರಡಿಸಿರುವ ಆದೇಶದಲ್ಲಿ ಅಶೋಕ ವೃತ್ತವನ್ನು ಸೇರಿಸಲಾಗಿದೆ. ಆದರೆ ಬಸ್ ನಿಲ್ದಾಣಗಳು ಈ ವ್ಯಾಪ್ತಿಯಿಂದ ಹೊರಗೆ ಇರಲಿವೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಅಶೋಕ ಸರ್ಕಲ್ ಕಂಟೈನ್ಮೆಂಟ್ ಜೋನ್ ವ್ಯಾಪ್ತಿಗೆ ಬರಲಿದೆ. ಆದರೆ ಕೆಎಸ್ಆರ್ಟಿಸಿ ಬಸ್ ನಿಲ್ದಾಣ, ಖಾಸಗಿ ಬಸ್ ನಿಲ್ದಾಣಗಳು ಈ ವ್ಯಾಪ್ತಿಗೆ ಒಳಪಡುವುದಿಲ್ಲ. ಹಾಗಾಗಿ ಸರ್ಕಾರಿ ಮತ್ತು ಖಾಸಗಿ ಬಸ್ ಸಂಚಾರ ಎಂದಿನಂತೆ ಇರಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಮತ್ತು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಇನ್ನು, ಶಿವಮೊಗ್ಗದ ಬಿ.ಹೆಚ್.ರಸ್ತೆಯಲ್ಲಿಯೂ ವಾಹನ ಸಂಚಾರಕ್ಕೆ ಯಾವುದೇ ಅಡ್ಡಿ ಇರುವುದಿಲ್ಲ. ಎನ್.ಟಿ.ರೋಡ್ನಲ್ಲಿಯೂ ವಾಹನ ಸಂಚಾರಕ್ಕೆ ನಿರ್ಬಂಧ ಇಲ್ಲ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]