ಮತ್ತೊಂದು ಹೈಟೆಕ್‌ ಬಸ್‌ ಪರಿಚಯಿಸುತ್ತಿದೆ KSRTC, ಸದ್ಯದಲ್ಲೇ ರಸ್ತೆಗಿಳಿಯಲಿದೆ ‘ಪಲ್ಲಕ್ಕಿ’

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 6 OCTOBER 2023

KSRTC NEWS : ಪ್ರಯಾಣಿಕರ ಅನುಕೂಲಕ್ಕೆ ಕೆಎಸ್‌ಆರ್‌ಟಿಸಿ ಸಂಸ್ಥೆ ಹೊಸ ಮಾದರಿಯ ಸ್ಲೀಪರ್‌ ಬಸ್ಸುಗಳನ್ನು  (Sleeper Bus) ಪರಿಚಯಿಸುತ್ತಿದೆ. ಎಸಿ ರಹಿತ ಕೆಟಗರಿಯಲ್ಲಿ ಪಲ್ಲಕ್ಕಿ ಎಂಬ ಬಸ್‌ ರಸ್ತೆಗಿಳಿಸಲು ಸಾರಿಗೆ ಸಂಸ್ಥೆ ಮುಂದಾಗಿದೆ.

ಕೆಎಸ್‌ಆರ್‌ಟಿಸಿಯ ಪಲ್ಲಕ್ಕಿ ಬಸ್ಸಿನ ವಿಡಿಯೋ ಹೊರ ಬಿದ್ದಿದೆ. ಸಾರಿಗೆ ಸಂಸ್ಥೆಯ ಟಿಪಿಕಲ್‌ ಬಣ್ಣದ ಮಾದರಿ ಇದರಲ್ಲಿ ಇಲ್ಲ. ಖಾಸಗಿ ಬಸ್ಸುಗಳಿಗೆ ತೀವ್ರ ಪೈಪೋಟಿ ಒಡ್ಡುವ ಬಣ್ಣ, ಡಿಸೈನ್‌ ಹೊಂದಿದೆ. ಬಸ್ಸಿನ ಎರಡು ಬದಿಯಲ್ಲಿ ಪಲ್ಲಕ್ಕಿಯಲ್ಲಿ ರಾಣಿಯನ್ನು ಕರೆದೊಯ್ಯುವ ಸ್ಟಿಕರಿಂಗ್‌ ಇದೆ.

ಇವು ನಾನ್‌ ಎಸಿ ಸ್ಲೀಪರ್‌ ಕ್ಲಾಸ್‌ ಬಸ್ಸುಗಳಾಗಿವೆ. ಸದ್ಯ ಕೆಎಸ್‌ಆರ್‌ಟಿಸಿಯು ಈ ಬಸ್ಸುಗಳನ್ನು ಯಾವ ಮಾರ್ಗದಲ್ಲಿ ಓಡಿಸಲಿದೆ ಎಂಬುದು ಇನ್ನು ಪ್ರಕಟವಾಗಿಲ್ಲ. ಶಕ್ತಿ ಯೋಜನೆ ಜಾರಿ ಬೆನ್ನಿಗೆ ಕೆಎಸ್‌ಆರ್‌ಟಿಸಿಯು ಹೊಸ ಬಸ್ಸುಗಳ ಖರೀದಿಗೆ ಮುಂದಾಗಿದೆ. ಈಗ ಹೊಸ ಮಾದರಿಯ ಸ್ಲೀಪರ್‌ ಕ್ಲಾಸ್‌ ಬಸ್ಸುಗಳು ರಸ್ತೆಗಿಳಿಯಲು ಸಜ್ಜಾಗಿರುವುದು ಪ್ರಯಾಣಿಕರ ಖುಷಿಗೆ ಕಾರಣವಾಗಿದೆ.

ಇದನ್ನೂ ಓದಿ- ಮಂಗಳೂರಿನಲ್ಲಿ ಸಾಲು ಸಾಲು ಪ್ರಶಸ್ತಿ ಬಾಚಿಕೊಂಡ ಶಿವಮೊಗ್ಗದ ಕ್ರೀಡಾಪಟುಗಳು

pallaki%202

ಸದ್ಯ ಕೆಎಸ್‌ಆರ್‌ಟಿಸಿ 40 ಪಲ್ಲಕ್ಕಿ ಸ್ಲೀಪರ್‌ ಬಸ್ಸುಗಳನ್ನು ರಸ್ತೆಗಿಳಿಸುತ್ತಿದೆ. 28 ಆಸನಗಳ ಸಾಮರ್ಥ್ಯ ಹೊಂದಿರುವ ಬಸ್‌ ಉಳಿದ ಸ್ಲೀಪರ್‌ ಕ್ಲಾಸ್‌ ಬಸ್‌ಗಿಂತಲೂ ಪ್ರಯಾಣಿಕ ಸ್ನೇಹಿಯಾಗಿದೆ. ಅ.7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಸ್ಸುಗಳಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ಬೆಂಗಳೂರಿನಿಂದ ಮೈಸೂರು, ಮಂಗಳೂರು, ಶಿವಮೊಗ್ಗ, ದಾವಣಗೆರೆ, ವಿಜಯಪುರ, ಹೊಸಪೇಟೆ ಮಾರ್ಗದಲ್ಲಿ ಈ ಬಸ್‌ ಸಂಚರಿಸಲಿದೆ ಎಂದು ತಿಳಿದು ಬಂದಿದೆ.

pallaki%201

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 6, 2023

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

Leave a Comment