ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಜುಲೈ 2021
ವಿದ್ಯುತ್ ಶಕ್ತಿ ಖಾಸಗೀಕರಣ ಮಸೂದೆ ಹಿಂಪಡೆಯದಿದ್ದರೆ ರೈತರು ವಿದ್ಯುತ್ ಬಿಲ್ ಪಾವತಿಸುವುದಿಲ್ಲ ಎಂದು ರಾಜ್ಯ ರೈತ ಸಂಘದ ವರಿಷ್ಠ ಕೆ.ಟಿ.ಗಂಗಧರ್ ಎಚ್ಚರಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಟಿ.ಗಂಗಾಧರ್, ವಿದ್ಯುತ್ ಶಕ್ತಿ ಖಾಸಗೀಕರಣ ಮಸೂದೆ ಹಿಂಪಡೆಯಲು ಅರಿವು ಮೂಡಿಸುವ ಭಿತ್ತಿ ಪತ್ರ ಪ್ರದರ್ಶನ ಮಾಡಿ ಮಾತನಾಡಿದರು.
ಜುಲೈ 21ಕ್ಕೆ ನರಗುಂದದಲ್ಲಿ ರೈತ ಬಂಡಾಯ ನಡೆದು 41 ವರ್ಷಗಳಾಗಿವೆ. ಹುತಾತ್ಮರಿಗೆ ಶ್ರದ್ದಾಂಜಲಿ ಅರ್ಪಿಸುವ ಜೊತೆಗೆ ಯಾವುದೇ ಕಾರಣಕ್ಕೂ ವಿದ್ಯುತ್ ಶಕ್ತಿ ಖಾಸಗೀಕರಣಗೊಳಿಸಬಾರದು ಮತ್ತು ಈ ಬಗ್ಗೆ ಬಯಲು ಸೀಮೆಯ ಜಿಲ್ಲೆಗಳಲ್ಲಿ ರೈತರಿಗೆ ಅರಿವು ಮೂಡಿಸುವ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದರು.
ದೆಹಲಿಯಲ್ಲಿ ಕರ್ನಾಟಕದ ಟೆಂಟ್
ಈ ಭಾರಿ ಜು.21ರಂದು ದೆಹಲಿಯ ಗಾಜಿಪುರ ಗಡಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ, ಭಾರತೀಯ ಕಿಸಾನ್ ಯೂನಿಯನ್ ಮುಖಂಡರಾದ ರಾಕೇಶ್ ಟಿಕಾಯಿತ್, ಯಧ್ವಿರ್ ಸಿಂಗ್ ನೇತೃತ್ವದಲ್ಲಿ ಚಳುವಳಿ ನಡೆಸುತ್ತಿರುವ ಜಾಗಕ್ಕೆ ಕರ್ನಾಟಕದ ರೈತ ಮುಖಂಡರು ತೆರಳಿ ಒಂದು ಪ್ರತ್ಯೇಕ ಸತ್ಯಾಗ್ರಹ ಟೆಂಟ್ ಉದ್ಘಾಟಿಸುವ ಮೂಲಕ ನರಗುಂದ ರೈತರ ಹುತಾತ್ಮ ದಿನಾಚರಣೆಯನ್ನು ನಡೆಸಲಾಗುವುದು. ಜುಲೈ 22ರಂದು ಸಂಸತ್ತಿನ ಮುಂದೆ ನಡೆಯಲಿರುವ ರೈತರ ಪ್ರತಿಭಟನೆಯಲ್ಲಿ ಕರ್ನಾಟಕದ ರೈತ ಚಳುವಳಿಯ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ರೈತ ಮುಖಂಡರಾದ ಮೋಹನ್ ಕೂಡ್ಲಿಗೆರೆ, ಕೆ.ಎಸ್.ಪುಟ್ಟಪ್ಪ, ಜಿ.ಆರ್.ಸಣ್ಣರಂಗಪ್ಪ, ಕೆ.ಸಿ.ಗಂಗಾಧರ್, ಮಂಜುನಾಥ್, ದೇವಕುಮಾರ್, ಪರಮೇಶ್ವರಪ್ಪ, ಅಣ್ಣಪ್ಪ ಇದ್ದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200