ಮಹಾರಾಷ್ಟ್ರದಿಂದ ಹಿಂತಿರುಗಿದ್ದ ವ್ಯಕ್ತಿಗೆ ಕರೋನ, ಶಿವಮೊಗ್ಗ ನಗರದ ಮತ್ತೊಂದು ಏರಿಯಾ ಸೀಲ್ ಡೌನ್

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಜೂನ್ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ವ್ಯಕ್ತಿಯೊಬ್ಬರಲ್ಲಿ ಕರೋನ ಸೋಂಕು ಕಾಣಿಸಿಕೊಂಡ ಹಿನ್ನೆಲೆ ನಗರದ ಕುಂಬಾರ ಕೇರಿ ರಸ್ತೆಯನ್ನು ಸೀಲ್‍ ಡೌನ್ ಮಾಡಲಾಗಿದೆ. ವ್ಯಕ್ತಿ ಜೊತೆಗಿನ ಪ್ರಾಥಮಿಕ ಸಂಪರ್ಕವನ್ನು ಪತ್ತೆ ಹಚ್ಚಿ ಅವರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.

ಮಹಾರಾಷ್ಟ್ರ ಲಿಂಕ್

ಸೋಂಕಿತ ವ್ಯಕ್ತಿ ಮಹಾರಾಷ್ಟ್ರದಿಂದ ಶಿವಮೊಗ್ಗಕ್ಕೆ ಹಿಂತಿರುಗಿದ್ದರು. ಇವರಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಹಾಗಾಗಿ ಇವರ ಮನೆ ಇರುವ ಕುಂಬಾರ ಕೇರಿ ಬೀದಿ ರಸ್ತೆಯನ್ನು ಬಂದ್ ಮಾಡಲಾಗಿದೆ. ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದೆ.

ಮಣಿಪಾಲದಲ್ಲಿ ಚಿಕಿತ್ಸೆ

ಸೋಂಕಿತ ವ್ಯಕ್ತಿಗೆ ಬೇರೆ ಆರೋಗ್ಯ ಸಮಸ್ಯೆಗಳಿವೆ. ಹಾಗಾಗಿ ರೋಗ ನಿರೋಧಕ ಶಕ್ತಿ ಕಡಿಮೆ ಎಂದು ಹೇಳಲಾಗುತ್ತಿದೆ. ಇದೆ ಕಾರಣಕ್ಕೆ ಸೋಂಕು ತಗುಲಿರುವ ಸಾದ್ಯತೆ ಇದೆ. ಸದ್ಯ ಬೇರೆ ಆರೋಗ್ಯ ಸಮಸ್ಯೆಯ ಕಾರಣಕ್ಕೆ ಮಣಿಪಾಲದ ಆಸ್ಪತ್ರೆಯಲ್ಲಿ ವ್ಯಕ್ತಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲಿ ಅವರನ್ನು ಕ್ವಾರಂಟೈನ್‍ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಹೆಂಡ್ತಿ, ಮಕ್ಕಳು, ಸಹೋದರನಿಗೆ ಕ್ವಾರಂಟೈನ್

ವ್ಯಕ್ತಿಯ ಜೊತೆಗೆ ಪ್ರಾಥಮಿಕ ಸಂಪರ್ಕವಿದ್ದವರನ್ನು ಈಗಾಗಲೇ ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ. ಹೆಂಡತಿ, ಮಕ್ಕಳು ಮತ್ತು ವ್ಯಕ್ತಿಯ ಸಹೋದರನನ್ನು ಪ್ರಾಥಮಿಕ ಸಂಪರ್ಕ ಎಂದು ಗುರುತಿಸಲಾಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment