ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 2 FEBRUARY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಕಲ್ಲು ತೂರಾಟ ನಡೆಸಿದ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಹಾಲುಮತ ಮಹಾಸಭಾದ ವತಿಯಿಂದ ಗುರುವಾರ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಕಲ್ಲು ತೂರಾಟ ಆಗಿದ್ದೆಲ್ಲಿ?
ಇತ್ತೀಚೆಗೆ ಮಂಡ್ಯ ನಗರದ ಮೈಸೂರು – ಬೆಂಗಳೂರು ರಸ್ತೆಯ ಜಿಲ್ಲಾ ಕುರುಬರ ಸಂಘದ ಸಾರ್ವಜನಿಕ ವಿದ್ಯಾರ್ಥಿ ನಿಲಯದ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ್ದರು. ಕಿಟಕಿಯ ಗಾಜು ಒಡೆದು ವಸ್ತುಗಳನ್ನು ಧ್ವಂಸ ಮಾಡಿದ್ದರು. ಭಕ್ತ ಕನಕದಾಸ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾವಚಿತ್ರಗಳನ್ನು ಹರಿದಿದ್ದಾರೆ. ಈ ವಿಚಾರದಲ್ಲಿ ತಮ್ಮ ಸಮಾಜದ ಧ್ವನಿ ಅಡಗಿಸುವ ಕುತಂತ್ರ ಅಡಗಿದೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.
ಡಿಸಿ ಮೂಲಕ ಗೃಹ ಸಚಿವರಿಗೆ ಮನವಿ
ಜಿಲ್ಲಾ ಕುರುಬರ ಸಂಘ, ಭದ್ರಾವತಿ ತಾಲ್ಲೂಕು ಕುರುಬರ ಸಂಘಗಳ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ರಾಜ್ಯ ಘಟಕದ ಉಪಾಧ್ಯಕ್ಷ ಡಾ.ಪ್ರಶಾಂತ್, ಜಿಲ್ಲಾ ಘಟಕದ ಅಧ್ಯಕ್ಷ ದಾನೇಶ್, ಗಣೇಶ್ ಬೀಳಗಿ, ಭದ್ರಾವತಿ ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಸಂತೋಷ್, ಕರ್ನಾಟಕ ಪ್ರದೇಶ ಕುರುಬರ ಸಂಘದ ನಿರ್ದೇಶಕ ರಂಗನಾಥ್, ಡಾ.ಶರತ್ ಮರಿಯಪ್ಪ, ಡಾ.ಸೌಮ್ಯ ಪ್ರಶಾಂತ್, ಜಿಲ್ಲಾ ಸಂಗೊಳ್ಳಿ ರಾಯಣ್ಣ ಕುರುಬರ ವೇದಿಕೆಯ ರಾಮಕೃಷ್ಣ ಮೂಡ್ಲಿ, ಅಣ್ಣಯ್ಯ, ವಿನಯ್ ನಾರಾಯಣಸ್ವಾಮಿ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – ಶಿವಮೊಗ್ಗ ಸಾಹಿತ್ಯ ಸಮ್ಮೇಳನ, ನಾಡ ಧ್ವಜದೊಂದಿಗೆ ರಾಜಬೀದಿ ಉತ್ಸವ, ಇಲ್ಲಿದೆ ಸಮ್ಮೇಳನಾಧ್ಯಕ್ಷರ ಭಾಷಣದ 3 ಪ್ರಮುಖಾಂಶ