ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ಡಿಸೆಂಬರ್ 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ ಖಂಡಿಸಿ ಶಿವಮೊಗ್ಗದಲ್ಲಿ ಜಿಲ್ಲಾ ಯುವ ಕುರುಬರ ಬಳಗ ಪ್ರತಿಭಟನೆ ನಡೆಸಿತು. ಎಂಇಎಸ್ ಗೂಂಡಾಗಳನ್ನು ಬಂಧಿಸಿ, ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ದೇಶಪ್ರೇಮಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸಗೊಳಿಸಲಾಗಿದೆ. ನಾಲ್ಕು ದಿನದ ಹಿಂದೆ ಕರ್ನಾಟಕದ ಧ್ವಜ ಸುಡಲಾಗಿತ್ತು. ಇಷ್ಟಾದರೂ ಎಂಇಎಸ್ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲು ಮೀನಮೇಷ ಎಣಿಸುತ್ತಿದೆ. ಧ್ವಜ ಸುಟ್ಟ ಪ್ರಕರಣ ಸಂಬಂಧ ಹೋರಾಟ ನಡೆಸಿದ ಕನ್ನಡಿಗರ ವಿರುದ್ಧವೇ ಕೇಸ್ ಹಾಕಲಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ವೇಳೆ ಮಾತನಾಡಿದ ಮಾಜಿ ಉಪಮೇಯರ್ ಪಾಲಾಕ್ಷಿ ಅವರು, ನಾಲ್ಕು ದಿನದ ಹಿಂದೆ ಕರ್ನಾಟಕದ ಧ್ವಜ ಸುಟ್ಟಿದ್ದಾರೆ. ಈಗ ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ ಮಾಡಿದ್ದಾರೆ. ಎಂಇಎಸ್ ಅನ್ನುವುದು ದೇಶದ್ರೋಹಿ ಸಂಘಟನೆಯಾಗಿದೆ. ಇದನ್ನ ಕೂಡಲೆ ನಿಷೇಧ ಮಾಡಬೇಕು. ಈ ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






