ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 12 ಜನವರಿ 2020
ಕುರುಬರ ಸಂಘದ ರಾಜ್ಯ ನಿರ್ದೇಶಕರ ಸ್ಥಾನಕ್ಕೆ ಇವತ್ತು ಚುನಾವಣೆ ನಡೆಯುತ್ತಿದೆ. ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ನಡೆಯುತ್ತಿದೆ.
ದುರ್ಗಿಗುಡಿ ಸರ್ಕಾರಿ ಶಾಲೆ ಆವರಣದಲ್ಲಿ 9 ಬೂತ್’ಗಳಲ್ಲಿ ಚುನಾವಣೆ ನಡೆಯುತ್ತಿದೆ. ಬೆಳಗ್ಗೆಯಿಂದಲು ಜಿಲ್ಲೆಯ ವಿವಿಧೆಡೆಯ ಮತದಾರರು ಮತದಾನ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಶಿವಮೊಗ್ಗದಿಂದ ನಾಲ್ಕು ನಿರ್ದೇಶಕರ ಆಯ್ಕೆ ನಡೆಯಲಿದೆ. ಒಟ್ಟು ಇಬ್ಬರು ಮಹಿಳಾ ಸ್ಪರ್ಧಿಗಳು ಸೇರಿದಂತೆ ಎಂಟು ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಸುಮಾರು ಆರು ಸಾವಿರ ಮತದಾರರು ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ.
ಡಿ.22ರಂದೆ ಚುನಾವಣೆ ನಡೆಯಬೇಕಿತ್ತು. ಆದರೆ ಬ್ಯಾಲೆಟ್ ಪೇಪರ್ ಗೊಂದಲದಿಂದಾಗಿ ಚುನಾವಣೆ ಮುಂದೂಡಲ್ಪಟ್ಟಿತ್ತು. ಶಿವಮೊಗ್ಗದ ಬ್ಯಾಲೆಟ್ ಪೇಪರ್’ಗಳ ಜೊತೆಗೆ ಬೀದರ್ ಜಿಲ್ಲೆಯ ಬ್ಯಾಲೆಟ್ ಪೇಪರ್’ಗಳು ಮಿಕ್ಸ್ ಆಗಿದ್ದರಿಂದ ಗೊಂದಲ ಸೃಷ್ಟಿಯಾಗಿ, ಚುನಾವಣೆಯೇ ನಿಲ್ಲಿಸಲಾಗಿತ್ತು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422